ಬಜೆಟ್ | ಕರಾವಳಿಯ ಜಿಲ್ಲೆಗಳಿಗೆ ವಿಶಿಷ್ಟ ಯೋಜನೆ: ಮೊದಲ ಬಾರಿಗೆ ‘ಸಮುದ್ರ ಆ್ಯಂಬುಲೆನ್ಸ್’ ಪರಿಚಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಬಜೆಟ್ ಭಾಷಣದಲ್ಲಿ ಮೂಲಸೌಕರ್ಯ ಕ್ಷೇತ್ರದ ಅಭಿವೃದ್ಧಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಕರಾವಳಿ ಜಿಲ್ಲೆಗಳನ್ನು ತಮ್ಮ ಬಜೆಟ್‌ನಲ್ಲಿ ಕೈಬಿಡದ ಸಿಎಂ, ಮೊದಲ ಬಾರಿಗೆ ಮೀನುಗಾರರ ರಕ್ಷಣೆಗೆ ‘ಸಮುದ್ರ ಆ್ಯಂಬುಲೆನ್ಸ್’ ಎಂಬ ಹೊಸ ಯೋಜನೆಯನ್ನು ಪರಿಚಯಿಸಿದ್ದಾರೆ.

ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ತುತ್ತಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ಏಳು ಕೋಟಿ ರೂ. ವೆಚ್ಚದಲ್ಲಿ ‘ಸಮುದ್ರ ಆ್ಯಂಬುಲೆನ್ಸ್’ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

2023ರ ಏಪ್ರಿಲ್‌ನಲ್ಲಿ ಉಡುಪಿಯಲ್ಲಿ ಮೀನುಗಾರರೊಂದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರೊಂದಿಗೆ ನಡೆದಿದ್ದ ಸಂವಾದದಲ್ಲಿ ‘ಸಮುದ್ರ ಆ್ಯಂಬುಲೆನ್ಸ್’ ನೀಡುವಂತೆ ಮೀನುಗಾರ ಮಹಿಳೆಯೋರ್ವರು ಮನವಿ ಮಾಡಿದ್ದರು. ಈ ಮನವಿಗೆ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಣೆ ಮಾಡುವ ಮೂಲಕ ಮೀನುಗಾರರಿಗೆ ರಾಹುಲ್ ಗಾಂಧಿ ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಉಳಿದಂತೆ ಘೋಷಿಸಲಾದ ಯೋಜನೆಗಳು ಈ ರೀತಿ ಇದೆ

  • ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ
  • ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ
  • ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆಗಳನ್ನು ಆಕರ್ಷಿಸಲು, ಕರ್ನಾಟಕ ಜಲಸಾರಿಗೆ ಅಭಿವೃದ್ಧಿ ನೀತಿಯನ್ನು ಹಾಗೂ ಒಳನಾಡು ಜಲಸಾರಿಗೆ ನಿಯಮ
  • ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿ
  • ಕರಾವಳಿ ತೀರ ಪ್ರದೇಶ ಹಾಗೂ ಬಂದರುಗಳ ಅಭಿವೃದ್ಧಿಯು ರಾಜ್ಯದ ಜಲಸಾರಿಗೆ ವಹಿವಾಟು ಹೆಚ್ಚಿಸಲು ನಿರ್ಧಾರ
  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ₹4200 ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ
  • ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು 3048 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತಾರಾಷ್ಟ್ರೀಯ ಟೆಂಡರ್
  • ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು Birth ಅಭಿವೃದ್ಧಿಪಡಿಸಲು ಗುರಿ
  • ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹಂತ ಹಂತವಾಗಿ ಹೂಳೆತ್ತುವ ಕಾಮಗಾರಿ
  • ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ.
  • ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿ
  • ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿ
  • ಹಳೆ ಮಂಗಳೂರು ಮತ್ತು ಹಂಗಾರಕಟ್ಟೆ ಬಂದರುಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಹಡಗು ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರನ್ನು (ICTP) ಅಭಿವೃದ್ಧಿಪಡಿಸಲು ಐ.ಐ.ಟಿ. ಮದ್ರಾಸ್ ಸಹಯೋಗದೊಂದಿಗೆ ಕಾರ್ಯಸಾಧ್ಯತಾ ವರದಿ
  • ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್
  • ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ
  • ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ 1600 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣಗಳ ಅಭಿವೃದ್ಧಿ
  • ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿ ಪ್ರಾರಂಭ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...