ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಸಭೆ ನಡೆಸಿ, ಕೂಡಲೇ ಬರಪರಿಹಾರ ಬಿಡುಗಡೆಗೆ ಆಗ್ರಹ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿಂದು ಭೇಟಿಯಾಗಿ, ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲೂಕುಗಳಲ್ಲಿ 223 ತಾಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು, ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಅನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, ₹18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ ₹4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, ₹12,577.86 ಕೋಟಿ ರೂ. ತುರ್ತು ಪರಿಹಾರ, ₹566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ ₹363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, ₹83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್‌ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ 2023ರ ಸೆಪ್ಟೆಂಬರ್ 22ರಿಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ ₹17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು.

ಇದರಲ್ಲಿ ತುರ್ತು ಪರಿಹಾರದ ₹12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.

ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ ₹18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...