ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರಕ್ಕೆ ರಾಜ್ಯದಿಂದ ಸರಣಿ ಪ್ರಶ್ನೆ

Date:

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಐದು ಚುನಾವಣಾ ಗ್ಯಾರಂಟಿಗಳ‌ ಪೈಕಿ ಅನ್ನಭಾಗ್ಯ ಗ್ಯಾರಂಟಿ ಕೂಡ ಘೋಷಿಸಿತ್ತು. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿತ್ತು. ಬಿಪಿಎಲ್‌, ಅಂತ್ಯೋದಯ ಕಾರ್ಡ್‌ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ತಿಳಿಸಿತ್ತು.

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಅನ್ನಭಾಗ್ಯ ಗ್ಯಾರಂಟಿಗಾಗಿ ಅಕ್ಕಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೇಳಿತ್ತು. ಮೊದಲು ಇದೆ ಎಂದಿದ್ದ ಆಹಾರ‌ ನಿಗಮವು, ಆ ಬಳಿಕ ಅಕ್ಕಿ ಸ್ಟಾಕ್ ಇಲ್ಲ ಎಂದು ತಿಳಿಸಿತ್ತು. ಆ ಬಳಿಕ ಇದು ರಾಜಕೀಯ ಪರ ವಿರೋಧ ಚರ್ಚೆಗೂ ವೇದಿಕೆಯಾಗಿತ್ತು. ಈ ಎಲ್ಲ ಬೆಳವಣಿಗೆಯ ನಡುವೆಯೇ ಕೇಂದ್ರ ಸರ್ಕಾರವು ‘ಭಾರತ್ ರೈಸ್’ ಎಂಬ ಹೆಸರಿನಲ್ಲಿ ಅಕ್ಕಿಯೊಂದನ್ನು ಬಿಡುಗಡೆ ಮಾಡಿತ್ತು.

ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಆಹಾರ ನಿಗಮದ ಗೋದಾಮಿನಲ್ಲಿ 18 ಮಿಲಿಯನ್ ಟನ್ ಅಕ್ಕಿ ಕೊಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಿಲೇವಾರಿ ಮಾಡಲು ಯೋಜನೆ ಹಾಕಿಕೊಂಡಿರುವ ಬಗ್ಗೆ ‘ದಿ ಮಿಂಟ್’ ಪತ್ರಿಕೆಯು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿಯನ್ನು ಅಸ್ತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಪಕ್ಷವು, ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ಸರಣಿ ಪ್ರಶ್ನೆಗಳಿಗೆ ಕೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್, “ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ” ಎಂದು ಕಿಡಿಕಾರಿದೆ.

“18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ ಸರ್ಕಾರ ಈಗ ಗೋದಾಮುಗಳಲ್ಲಿ ದಾಸ್ತಾನಿರುವ ಅಕ್ಕಿಯನ್ನು ಖಾಲಿ ಮಾಡಲು ಪರದಾಡುತ್ತಿದೆ” ಎಂದು ವರದಿಯನ್ನು ಉಲ್ಲೇಖಿಸಿ ಹೇಳಿದೆ.

ಅಕ್ಕಿ ರಾಜಕೀಯ ಮಾಡಿದ ಕೇಂದ್ರ ಸರ್ಕಾರಕ್ಕೆ ಕೆಲವು ಪ್ರಶ್ನೆಗಳು ಎಂದು ಸರಣಿ ಪ್ರಶ್ನೆಗಳನ್ನು ಕೇಳಿರುವ ಕಾಂಗ್ರೆಸ್, ಉತ್ತರಿಸುವಂತೆ ಆಗ್ರಹಿಸಿದೆ.

“24 ರೂಪಾಯಿಯ ಭಾರತ್ ಅಕ್ಕಿ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿಯಿತೇ? ಖಾಸಗಿ ಕಂಪೆನಿಗಳೂ ಸಹ ಕೇಂದ್ರ ಆಹಾರ ನಿಗಮದ ಅಕ್ಕಿಯನ್ನು ಖರೀದಿಸಲು ಮುಂದಾಗಲಿಲ್ಲವೇ?” ಎಂದು ಕೇಳಿದೆ.

“ಖಾಲಿ ಮಾಡಲಾಗದಷ್ಟು ಅಕ್ಕಿ ಇದ್ದರೂ ಕನ್ನಡಿಗರಿಗೆ ವಂಚಿಸಿದ್ದೇಕೆ? ನಮ್ಮ ಸರ್ಕಾರ ಕೆಜಿಗೆ ₹34 ಕೊಟ್ಟು ಖರೀದಿಸಿದ್ದಿದ್ದರೆ ಆಹಾರ ನಿಗಮಕ್ಕೆ ಲಾಭವಾಗುತ್ತಿತ್ತು, ಆ ಲಾಭವನ್ನು ತಪ್ಪಿಸಿ ನಷ್ಟಕ್ಕೆ ತಳ್ಳಿದ್ದೇಕೆ? ಕನ್ನಡಿಗರಿಗೆ ಅಕ್ಕಿ ನೀಡದೆ ದ್ರೋಹ ಮಾಡಿದಿರಲ್ಲ,
ಕನ್ನಡಿಗರು ನಿಮಗೆ ಯಾವ ಜನ್ಮದ ಶತ್ರುಗಳು?” ಎಂದು ಕಾಂಗ್ರೆಸ್ ಕೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...