ಮಹಾಘಟಬಂಧನ್ | ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ ಜಾರಿ: ಕುಮಾರಸ್ವಾಮಿ ಆರೋಪ

Date:

ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ರಾಜಕೀಯ, ಆಡಳಿತ ವಸಾಹತುಶಾಹಿಯನ್ನು ದೇಶಕ್ಕೆ ಪರಿಚಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್‌ ಸರ್ಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ” ಎಂದು ಪ್ರಶ್ನಿಸಿದ್ದಾರೆ.

“ಇದು ರಾಜ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂತ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂತ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತ ಸಾಧಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

“ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂತ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ” ಎಂದು ಟೀಕಿಸಿದ್ದಾರೆ.

“135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...