ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡಿದ್ದ ಖಾಲಿ ಚೊಂಬನ್ನ ತುಂಬಿಸುವ ತೀರ್ಪು ನೀಡಿದೆ: ಸಚಿವ ಗುಂಡೂರಾವ್

Date:

ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕವನ್ನ ಕಡೆಗಣಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗವಾಗಿದೆ ಎಂದು ಸರ್ಕಾರದ ಮುಖ್ಯ ವಕ್ತಾರರಾಗಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಕರ್ನಾಟಕದ ನ್ಯಾಯಯುತ ಹೋರಾಟಕ್ಕೆ ಸಂದಿರುವ ಜಯ. ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನ ಸುಪ್ರೀಂ ಕೋರ್ಟ್ ನೀಡಿದೆ” ಎಂದರು.

“ಒಂದು ರಾಜ್ಯ ಸ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ. ಆದರೆ ಕೇಂದ್ರ ತಮಗಿಷ್ಟ ಬಂದಂತೆ ಬೇಕಾಬಿಟ್ಟಿಯಾಗಿ ನಡೆದುಕೊಂಡಿತ್ತು. ಮೂರು ಬಾರಿ ರಾಜ್ಯದ ಬರ ಪರಿಸ್ಥಿತಿ ಕುರಿತು ವರದಿ ನೀಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರದ ಕಾನೂನು ಹೋರಾಟಕ್ಕೆ ಇಳಿಯಬೇಕಾಯಿತು” ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷಕ್ಕಿಳಿಯುವ ಉದ್ದೇಶದಿಂದ ನಾವು ಕೋರ್ಟ್ ಮೊರೆ ಹೋಗಿರಲಿಲ್ಲ. ಕರ್ನಾಟಕದ ರೈತರು ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಸಿಗಬೇಕಾದ ಪರಿಹಾರಕ್ಕಾಗಿ ನಾವು ಹೋಗಿದ್ದೇವೆ. ರಾಜ್ಯ ಸರ್ಕಾರಗಳ ಜೊತೆ ಏಕೆ ಸಂಘರ್ಷಕ್ಕೆ ಇಳಿಯುತ್ತಿದ್ದೀರಿ ಎಂದು ಸ್ವತಃ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಸುಪ್ರೀಂ ಕೋರ್ಟಿಗೆ ಬಂದಿವೆ. ಇದನ್ನ ಬಗೆಹರಿಸಿಕೊಳ್ಳಬೇಕು ಅಂತ ಕೇಂದ್ರ ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ” ಎಂದು ಸಚಿವರು ಹೇಳಿದರು.‌

“ಕರ್ನಾಟಕಕ್ಕೆ ಪರಿಹಾರ ಕೊಡುವ ಮನಸ್ಸು ಮೋದಿಯವರಿಗೆ ಇದ್ದಿರಲಿಲ್ಲ. ಕೋರ್ಟ್ ಮುಂದೆ ಮತ್ತೆ ಮುಖಭಂಗ ಆಗಬಾರದು ಎಂಬ ಕಾರಣಕ್ಕೆ ಆದಷ್ಟು ಶೀಘ್ರದಲ್ಲಿ ಬಿಡುಗಡೆ ಮಾಡುತ್ತೇವೆ ಅಂತ ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ. ಸೋಮವಾರದ ಒಳಗಡೆ ಬರ ಪರಿಹಾರ ಬಿಡುಗಡೆ ಆಗುವ ನಿರೀಕ್ಷೆ ರಾಜ್ಯಕ್ಕಿದೆ. ಒಂದು ರಾಜ್ಯ ಕೋರ್ಟ್ ಮುಖಾಂತರ ಪರಿಹಾರ ಪಡೆಯುತ್ತಿದೆ ಎಂದರೆ ಯಾವ ಮನಸ್ಥಿತಿ ಕೇಂದ್ರ ಸರ್ಕಾರಕ್ಕೆ ಇತ್ತು. ಜನರ ಸಮಸ್ಯೆಗೆ ಸ್ಪಂದನೆ ಮಾಡೋದಕ್ಕೆ ಕೇಂದ್ರ ಸರ್ಕಾರಕ್ಕೆ ಆಗಿಲ್ಲ ಎಂಬುದು ಸಾಬೀತಾಗಿದೆ.‌ ಬರ ವಿಚಾರದಲ್ಲಿ ಸುಪ್ರೀಂ ಕೋರ್ಟಿಗೆ ಅರ್ಥವಾಗುವ ಗಾಂಭೀರ್ಯತೆ ಮತ್ತು ಸೂಕ್ಷ್ಮತೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಕೆ ಅರ್ಥವಾಗಲಿಲ್ಲ” ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

ಕೇಂದ್ರ ಸರ್ಕಾರ ನಮಗೆ ಏನು ಖಾಲಿ ಚೊಂಬು ಕೊಟ್ಟಿದ್ದರು. ಆ ಖಾಲಿ ಚೊಂಬಿನಲ್ಲಿ‌ ಸ್ವಲ್ಪ ತುಂಬಿಸುವ ಕೆಲಸ ಸರ್ವೋಚ್ಛ ನ್ಯಾಯಾಲಯ ಮಾಡಿದೆ. ರಾಜ್ಯ ಸರ್ಕಾರ ನಮ್ಮ ರಾಜ್ಯದ ಹಕ್ಕಿನ ಪ್ರತಿಪಾದನೆ ಮಾಡುತ್ತಿರುವುದು ಸರಿ ಇದೆ. ಮುಂದಿನ ದಿನಗಳಲ್ಲಿ ಅನೇಕ ವಿಚಾರಗಳಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಗಬೇಕಿದೆ. ನಾವು ರಾಜ್ಯದ ಜನತೆಯ ಪರವಾಗಿ ಎಲ್ಲಾ ರೀತಿಯ ಹೋರಾಟ ಮಾಡಲು ತಯಾರಾಗಿದ್ದೇವೆ.‌ ನಾಳೆ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಅವರಿಗೆ ಇದು ಕಪಾಳ ಮೋಕ್ಷ. ಈ ಅಹಂಕಾರವನ್ನು ಬಿಟ್ಟುಬಿಡಿ.. ಜನರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ತಾರತಮ್ಯ ಮಾಡಬೇಡಿ ಎಂದು ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.‌

ಇದನ್ನು ಓದಿದ್ದೀರಾ? ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆ: ತಜ್ಞರ ಸಮಿತಿ ರಚಿಸಿದ ಸರ್ಕಾರ

ಮಹಿಳೆಯರ ಮಂಗಳಸೂತ್ರ ಕಸಿಯುವ ಪ್ರಧಾನಿಯವರ ಹೇಳಿಕೆ ಕೀಳು ಮಟ್ಟದ್ದು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳ ಸೂತ್ರ ಕಸಿಯಲಿದೆ ಎಂಬ ಮೋದಿಯವರ ಹೇಳಿಕೆ ಅವರ ಮನಸ್ಥಿತಿಯನ್ನ ತೋರಿಸುತ್ತದೆ. ದೇಶದ ಇತಿಹಾಸದಲ್ಲಿ ಯಾವ ಪ್ರಧಾನಿಯು ಈ ಕೆಳಮಟ್ಟಕ್ಕೆ ಇಳಿದು ಮಾತನಾಡಿರುವುದು ನಾನು ನೋಡಿರಲಿಲ್ಲ ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಿಸಿದರು.‌

ಸೋಲಿನ ಭೀತಿಯಲ್ಲಿ ಹತಾಶರಾಗಿ ಮತ್ತೆ ವೈಷಮ್ಯವನ್ನು ಬೆಳೆಸಬೇಕು. ದೇಶದ ಜನರನ್ನ ಒಡೆಯಬೇಕು ಭಾವನೆಗಳನ್ನು ಕೆರಳಿಸಬೇಕು ಅಂತ ಕೀಳು ಮಟ್ಟದ ಭಾಷಣ ಪ್ರಧಾನ ಮಂತ್ರಿ ಮೋದಿ ಮಾಡಿದ್ದಾರೆ. ನಿಜವಾಗಿಯೂ ಇದನ್ನು ಕೇಳಿದರೆ ಆಶ್ಚರ್ಯ ಆಗುತ್ತದೆ. ಒಬ್ಬ ಪ್ರಧಾನಿ ಈ ರೀತಿ ಮಾತನಾಡಬಹುದೇ.? ಮೊದಲ ಹಂತದ ಮತದಾನದಲ್ಲಿ ಬಿಜೆಪಿ ಹಿಂದೆ ಬಿದ್ದಿದೆ. ಇಂಡಿಯಾ ಮೈತ್ರಿಕೂಟ ಮುಂದೆ ಹೋಗಿದೆ ಅನ್ನೋದು ಮೋದಿಯವರ ಈ ಹೇಳಿಕೆಯ ತಾತ್ಪರ್ಯ ಎಂದು ಸಚಿವ ಗುಂಡೂರಾವ್ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...