ವಾಲ್ಮೀಕಿ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

Date:

ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ ತನಿಖೆಗೆ ಆದೇಶಿಸಿದೆ.

ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸುವ ಮೂಲಕ ಎಲ್ಲಾ ತನಿಖಾ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಹೈಕೋರ್ಟ್‌ ವಿಶೇಷ ತನಿಖಾ ತಂಡ(ಎಸ್‌ಐಟಿ) ಗೆ ನಿರ್ದೇಶಿಸಿದೆ. ಹಾಗೆಯೇ ವಿಸ್ತೃತವಾದ ಸ್ಥಿತಿಗತಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ.

ಇದನ್ನು ಓದಿದ್ದೀರಾ? ವಾಲ್ಮೀಕಿ ನಿಗಮ ಹಗರಣ | ಮಾಜಿ ಸಚಿವ ನಾಗೇಂದ್ರಗೆ ಜಾಮೀನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಲ್ಮೀಕಿ ಪ್ರಕರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಜೂನ್‌ನಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಬಳ್ಳಾರಿಯ ಕಾಂಗ್ರೆಸ್ ಸಂಸದ ಇ. ತುಕಾರಾಂ ಮತ್ತು ರಾಜ್ಯದ ಇತರೆ ಮೂವರು ಶಾಸಕರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿತ್ತು.

ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಪಿ ಅವರು ತಮ್ಮ ನಿವಾಸದಲ್ಲಿ 2024ರ ಮೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ನಂತರ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬೃಹತ್‌ ಅಕ್ರಮ ಬೆಳಕಿಗೆ ಬಂದಿದೆ. ಚಂದ್ರಶೇಖರ್‌ ಅವರು ತಮ್ಮ ಡೆತ್‌ ನೋಟ್‌ನಲ್ಲಿ ನಿಗಮದಲ್ಲಿ ನಡೆದಿರುವ ಗಂಭೀರ ಆರ್ಥಿಕ ಅವ್ಯವಹಾರಗಳ ಬಗ್ಗೆ ಆರೋಪಿಸಿದ್ದರು. ಸದ್ಯ ಈ ಪ್ರಕರಣದ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...