ಸಂತ್ರಸ್ತೆಯ ಅಪಹರಣ ಪ್ರಕರಣ | ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

Date:

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಹೇಳಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ರೇವಣ್ಣಗೆ ಜಾಮೀನು ಮಂಜೂರು ಮಾಡಿರುವುದನ್ನು ರದ್ದುಪಡಿಸುವಂತೆ ಕೋರಿ ವಿಶೇಷ ತನಿಖಾ ದಳವು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿದ ವೇಳೆ ಈ ರೀತಿಯಲ್ಲಿ ಅಭಿಪ್ರಾಯಪಟ್ಟಿದೆ.

ಎಸ್‌ಐಟಿ ಪರವಾಗಿ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌, “ಸಂತ್ರಸ್ತೆಯನ್ನು ಅಪಹರಿಸಿರುವ ಈ ಪ್ರಕರಣ ಅತ್ಯಂತ ಗಂಭೀರವಾಗಿದೆ. ಜಾಮೀನು ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ತಪ್ಪಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ವಿಚಾರಣಾಧೀನ ನ್ಯಾಯಾಲಯವು ಐಪಿಸಿ ಸೆಕ್ಷನ್‌ 364ಎ ಅರ್ಜಿಯಲ್ಲಿ ಪ್ರಮಾದ ಎಸಗಿದೆ” ಎಂದು ಉಲ್ಲೇಖಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ ಪೀಠವು, “ವಾದದಲ್ಲಿ ಬಲ ಇದೆ. ದಾಖಲೆಯನ್ನು ಪರಿಶೀಲಿಸಿದರೆ ದೋಷ ಇದ್ದಂತಿದೆ” ಎಂದಿತು. ಆಗ ಪ್ರೊ. ರವಿವರ್ಮ ಕುಮಾರ್‌ ಅವರು, “ದೂರು ನೀಡುವುದರಿಂದ ಆಕೆಯನ್ನು ತಡೆಯಲು ಅಪಹರಿಸಲಾಗಿದೆ. ಸಾಕ್ಷಿಯನ್ನು ಅಪಹರಿಸಲಾಗಿದೆ. ಪ್ರಕರಣವನ್ನು ತುರ್ತಾಗಿ ಆಲಿಸಬೇಕು. ಈ ನಡೆಗೆ ಅನುಮತಿಸಿದರೆ ಯಾರೂ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗದು” ಎಂದರು.

ಆಗ ನ್ಯಾಯಮೂರ್ತಿ ದೀಕ್ಷಿತ್‌ ಅವರು, “ವಾದ ಆಲಿಸಲು ಇದು ಸೂಕ್ತ ಪ್ರಕರಣವಾಗಿದೆ. ನೋಟಿಸ್‌ ಜಾರಿ ಮಾಡಲಾಗಿದೆ. ಈ ಪೀಠ ಪ್ರತ್ಯೇಕವಾಗಿ ಕುಳಿತಾಗ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಬೇಕು” ಎಂದು ಆದೇಶಿಸಿತು.

ಹೊಳೆನರಸೀಪುರದಲ್ಲಿ ಏಪ್ರಿಲ್‌ 28ರಂದು ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ದೂರುದಾರೆಯನ್ನು ಅಪಹರಿಸಿದ ಸಂಬಂಧ ಆಕೆಯ ಪುತ್ರ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲೆಯ ಕೆ ಆರ್‌ ನಗರ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರಾಗಿದೆ.

ರೇವಣ್ಣಗೆ ಸೆಕ್ಷನ್‌ 364ಎ ಅನ್ವಯಿಸಲ್ಲ: ಸಿ ವಿ ನಾಗೇಶ್‌

ಕೆ ಆರ್‌ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯವು ಇಂದು ನಡೆಸಿತು. ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

ರೇವಣ್ಣ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು, “ದೂರಿನ ಆರೋಪವನ್ನು ಪರಿಗಣಿಸಿದರೆ ಐಪಿಸಿ 364ಎ ಅಡಿ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗದು. ಈ ನಿಬಂಧನೆ ಉಲ್ಲೇಖಿಸಲು ಅಪಹರಣ ನಡೆಸಲಾಗಿದೆ ಎಂದು ಆರೋಪಿಸುವುದು ಸಾಕಾಗುವುದಿಲ್ಲ. ಸೆಕ್ಷನ್‌ 364ಎ ಅನ್ವಯಿಸಲು ಬೇಡಿಕೆ ಅಥವಾ ಬೆದರಿಕೆಯೂ ದೂರಿನ ಭಾಗವಾಗಬೇಕು. ಆದರೆ, ದೂರಿನಲ್ಲಿ ಆ ಆರೋಪವಿಲ್ಲ” ಎಂದರು.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಮುಂದುವರಿದು, “ಸಂತ್ರಸ್ತೆ ಮಹಿಳೆಯು ಹತ್ತು ವರ್ಷಗಳಿಂದ ರೇವಣ್ಣ ಮನೆಯಲ್ಲಿ ಮನೆಕೆಲಸ ಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್‌ ಹೇಳಿದೆ. “ರೇವಣ್ಣ ಆಕೆಯನ್ನು ಅಪಹರಿಸಿಲ್ಲ. ನಾನು ಆಕೆಯನ್ನು ಬರುವಂತೆ ಸೂಚಿಸಿದ್ದರೆ ಆಕೆ ಬರುತ್ತಿದ್ದರು” ಎಂದರು.

ಅಂತಿಮವಾಗಿ ಪೀಠವು ಜೂನ್‌ 3ರಂದು ವಿಚಾರಣೆ ನಡೆಸಲಾಗುವುದು ಎಂದಿತು. ಇದು ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...