ಕಾಂಗ್ರೆಸ್‌ನಿಂದಾಗಿ ಉಗ್ರರ ಅಡಗುತಾಣವಾಗುತ್ತಿರುವ ಕರ್ನಾಟಕ : ಶೋಭಾ ಕರಂದ್ಲಾಜೆ ಆರೋಪ

Date:

ಕೇರಳದ ರೀತಿಯಲ್ಲಿಯೇ ಕರ್ನಾಟಕವನ್ನು ಭಯೋತ್ಪಾದಕರ ಅಡಗುತಾಣವನ್ನಾಗಿ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್‌ನ ಓಟ್ ಬ್ಯಾಂಕ್ ರಾಜಕಾರಣ ಹಾಗೂ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ದೆಹಲಿಯಲ್ಲಿಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡ್ತಿದ್ದಾರೆ. ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ. ಈ ಹಿಂದೆ ಕೇರಳವು ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿತ್ತು. ಈಗ ಕರ್ನಾಟಕವನ್ನು ಆ ರೀತಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆಲ್ಲ ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳೇ ಉದಾಹರಣೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ಜಯೇಶ್ ಪೂಜಾರಿ ಎನ್ನುವ ವ್ಯಕ್ತಿ ಕೇಂದ್ರದ ಮಂತ್ರಿ ನಿತಿನ್ ಗಡ್ಕರಿಯವರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಾನೆ. ಈ ಜಾಲವನ್ನು ತನಿಖೆ ಮಾಡಿದಾಗ ಜಯೇಶ್ ಪೂಜಾರಿಯನ್ನು ಅಫ್ಸರ್ ಪಾಷಾ ಅನ್ನುವ ವ್ಯಕ್ತಿ ಈತನನ್ನು ಜೈಲಿನಲ್ಲಿಯೇ ಮತಾಂತರಿಸಿ, ಶಾಹೀರ್ ಆಗಿ ಮಾಡಿದ್ದಾನೆ. ಕಾರಾಗೃಹಗಳಲ್ಲಿರುವ ಅಮಾಯಕ ಹಿಂದೂ ಯುವಕರನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಯುವಕರು ಐಸಿಸ್ ಸೇರಿ ಬೇರೆ ಸಂಘಟನೆಗಳ ಜತೆ ಸಂಪರ್ಕ ಹೊಂದುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರು ಕುಕ್ಕರ್ ಬ್ಲಾಸ್ಟ್ ಘಟನೆಯಿಂದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ಮಾಡಿ, ಬದುಕಿ ಉಳಿದಿದ್ದಾರೆ. ಆದರೆ ಅವರು ಅಂಗವಿಕಲರಾಗಿ ಬದುಕುವ ಸ್ಥಿತಿ ಅವರಿಗೆ ಬಂದಿದೆ. ಕುಕ್ಕರ್ ಬಾಂಬ್ ಸಾಗಿಸುತ್ತಿದ್ದ ಆರೋಪಿ ಶಾರೂಕ್ ಇಂದು ಜೈಲಲ್ಲಿದ್ಧಾನೆ. ಹಾಗಾಗಿ ಮಂಗಳೂರಿನ ಘಟನೆಗೆ ಭಯೋತ್ಪಾದಕ ಸಂಘಟನೆಗಳ ಜೊತೆಗೆ ಸಂಬಂಧವಿರುವುದು ಆವಾಗಲೇ ಹೇಳಿದ್ದೆ. ಆದರೆ ಕಾಂಗ್ರೆಸ್‌ನವರು ನಮ್ಮ ಬ್ರದರ್ಸ್‌ ಎಂದು ಹೇಳುತ್ತಾ ಓಟ್ ಬ್ಯಾಂಕ್ ರಾಜಕಾರಣ ಮಾಡಿತು. ಚುನಾವಣೆಗೋಸ್ಕರ ಬಿಜೆಪಿ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಆಗ ಆರೋಪಿಸಿದ್ದರು. ಈಗ ನಡೆಯುತ್ತಿರುವ ಬೆಳವಣಿಗೆಗಳು ಏನು ಸೂಚಿಸುತ್ತವೆ ಎಂದು ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಇಂದು ನಾವ್ಯಾರೂ ಸುರಕ್ಷಿತರಾಗಿಲ್ಲ. ಭಯೋತ್ಪಾದನಾ ಚಟುವಟಿಕೆಗಳು ಜೈಲಿನಿಂದಲೇ ನಡೆಯುತ್ತಿರುವುದು ಆಘಾತ ಉಂಟು ಮಾಡಿದೆ. ಇದಕ್ಕೆಲ್ಲ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಕಾರಣ. ಆದ್ದರಿಂದ ಕಾಂಗ್ರೆಸ್‌ನವರು ಓಲೈಕೆ ರಾಜಕಾರಣ ಬಿಟ್ಟು, ಇದನ್ನು ತಡೆಯಬೇಕಿದೆ. ದೇಶದ ಹಾಗೂ ಕರ್ನಾಟಕದ ರಕ್ಷಣೆಯ ಹಿತದೃಷ್ಟಿಯ ಬಗ್ಗೆ ಯೋಚನೆ ಮಾಡಬೇಕು. ಈ ಎಲ್ಲ ಪ್ರಕರಣವನ್ನು ಎನ್‌ಐಎಯ ಮೂಲಕ ತನಿಖೆ ನಡೆಸಲು ನೀಡುವಂತೆ ಆಗ್ರಹ ಮಾಡುತ್ತೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...