ಕರ್ನಾಟಕ ಫಲಿತಾಂಶ | ಹಾವು-ಏಣಿ ಆಟದಲ್ಲಿ ಅಭ್ಯರ್ಥಿಗಳು

Date:

ಕರ್ನಾಟಕದಲ್ಲಿ 29 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಹಾವು ಏಣಿ ಆಟದಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯದ ಚಿತ್ರಣ ಇಲ್ಲಿದೆ.

ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಹಿನ್ನಡೆ ಅನುಭವಿಸಿದ್ದು, ಜೆಡಿಎಸ್‌ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಒಂದು ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚಾಮರಾಜನಗರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಹೆಚ್‌ ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ ಅವರು 50 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಎಸ್‌ ಬಾಲರಾಜ್‌ ಹಿನ್ನಡೆ ಅನುಭವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ ಲಕ್ಷ್ಮಣ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್ 53 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಬೀದರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ ಅವರು 24 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹಿನ್ನಡೆ ಅನುಭವಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಯಪ್ರಕಾಶ್‌ ಹೆಗಡೆ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಒಂದು ಲಕ್ಷ ಮತಗಳ ಮುನ್ನಡೆಯಲ್ಲಿದ್ದಾರೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ‌ ಪದ್ಮರಾಜ್ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಅವರು 21 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಮ್ ಅವರು 34 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಹಿನ್ನಡೆ ಅನುಭವಿಸಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು 31 ಸಾವಿರ ಮತಗಳ ಮುನ್ನಡೆಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್‌ ಜೊಲ್ಲೆ ಹಿನ್ನಡೆ ಅನುಭವಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...