ಕರ್ನಾಟಕ ಫಲಿತಾಂಶ | ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಲ್ಲಿ ಮೂವರಿಗೆ ಗೆಲುವು

Date:

ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಆರು ಸಚಿವರ ಮಕ್ಕಳಿಗೆ ಟಿಕಟ್‌ ಘೋಷಿಸಲಾಗಿತ್ತು. ಈ ಪೈಕಿ ಮೂವರು ಸಚಿವ ಮಕ್ಕಳು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್‌ ಜೊಲ್ಲೆ ಅವರನ್ನು ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ.

ಬೆಳಗಾವಿ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ ತೊರೆದು ಮರಳಿ ಬಿಜೆಪಿ ಸೇರಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಇಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಗಲಕೋಟೆ ಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್‌ ಸೋಲು ಅನುಭವಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಗೆಲುವಿನ ಸರ್ದಾರ ಪಿ ಸಿ ಗದ್ದಿಗೌಡರ್‌ ಮತ್ತೆ ಗೆಲುವಿನ ನಗೆ ಬೀರಿದ್ದಾರೆ.

ಬೀದರ್ ಕ್ಷೇತ್ರದಲ್ಲಿ ಸಚಿವ ಈಶ್ವರ್‌ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ ಅವರು ಗೆಲುವು ಸಾಧಿಸಿದ್ದು, ರಾಜ್ಯದ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಬಿಜೆಪಿಯ ಭಗವಂತ ಖೂಬಾ ಸೋಲು ಅನುಭವಿಸಿದ್ದಾರೆ.

ಚಾಮರಾಜನಗರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಚಿವ ಹೆಚ್‌ ಸಿ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ ಗೆಲುವು ಸಾಧಿಸಿ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್‌ ಬಾಲರಾಜ್‌ ಸೋಲು ಕಂಡಿದ್ದಾರೆ.

ಬೆಂಗಳೂರು ದಕ್ಷಿಣ ಕೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎರಡನೇ ಅವಧಿಗೆ ಗೆಲುವು ಸಾಧಿಸಿ ಸಂಸತ್‌ ಪ್ರವೇಶಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...