ಕೆಎಎಸ್ ನೇಮಕಾತಿ | 2017-18ರಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮತ್ತೊಂದು ಬಾರಿ ಅವಕಾಶ

Date:

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶ ಒದಗಿಸಿ ಸರ್ಕಾರ ಆದೇಶಿಸಿದೆ.

2023-24 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನಲ್ಲಿ ಕೆಎಎಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಇಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ.

ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದ್ದು ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದರು. ಈ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...