ಗಂಗಾರತಿ‌ ಮಾದರಿಯಲ್ಲೇ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ: ಡಿ ಕೆ ಶಿವಕುಮಾರ್‌

Date:

ಗಂಗಾರತಿ‌ ಮಾದರಿಯಲ್ಲೇ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ವರುಣನ ಕೃಪೆ, ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ” ಎಂದು ತಿಳಿಸಿದರು.

“ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು. ಆದರೆ 20 ಟಿಎಂಸಿ ಬಿಡಲು ಹೇಳಿತ್ತು. ಅಷ್ಟನ್ನೂ ನಾವು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ನಾವು ಎಲ್ಲರನ್ನು ಕರೆದು ಚರ್ಚೆ ಮಾಡಿದ್ದೇವೆ. ಆನಂತರ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“25 ಜನರ ತಂಡ ಕಳುಹಿಸಿ ನಂತರ ವರದಿ ಕೊಡುತ್ತಾರೆ. ಆನಂತರ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತೇವೆ. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ” ಎಂದರು.

ಕೆರೆ ತುಂಬಿಸಲು ಸೂಚನೆ

“ಕಾವೇರಿ ಜಲಾನಯನ ಪ್ರದೇಶದಲ್ಲಿ 1657 ಕೆರೆಗಳು ಇವೆ. ಎಲ್ಲ ಕೆರೆಗಳನ್ನ ತುಂಬಿಸಲು ಕಾರ್ಯಕ್ರಮ ರೂಪಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎರಡು ಲಕ್ಷ ಹೆಕ್ಟರ್ ಬಿತ್ತನೆ ಗುರಿ ಹೊಂದಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರದ ವ್ಯವಸ್ಥೆ ಮಾಡಲಾಗಿದೆ. ರೈತರಿಗೆ 25 ಕೋಟಿ ರೂ. ಸಾಲ ಕೂಡ ನೀಡಲಾಗುತ್ತಿದೆ. ರೈತರ ಪರವಾಗಿ ನಮ್ಮ ಬದ್ಧತೆ ಇದೆ” ಎಂದು ಹೇಳಿದರು.

ಕಾವೇರಿ ಬೃಂದಾವನ ಅಮ್ಯೂಸ್ಮೆಂಟ್ ಪಾರ್ಕ್

“ಕಾವೇರಿ ಬೃಂದಾವನ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲಾಗುತ್ತದೆ. ಏನು ಯೋಜನೆ ಎಂಬುದು ಮುಂದೆ ಗೊತ್ತಾಗುತ್ತದೆ. ಯಾರೂ ಗಾಬರಿ ಆಗುವುದು ಬೇಡ. ಟೀಕೆ ಟಿಪ್ಪಣಿ ‌ಹಾರ ಹಾಕುವವವರು, ಕಲ್ಲು ಹೊಡೆಯುವವರು ಎಲ್ಲರು ಕೂಡ ಇರುತ್ತಾರೆ. ರಾಜಕಾರಣದಲ್ಲಿ ಇವೆಲ್ಲ ಸಹಜ” ಎಂದು ಪರೋಕ್ಷವಾಗಿ ಕುಟುಕಿದರು.

ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಕೆಶಿ ಜೊತೆ ಬೆಳಿಗ್ಗೆ ಕೆ.ಆರ್.ಎಸ್ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಯ ನಯನ ಮನೋಹರ ದೃಶ್ಯ ಕಣ್ತುಂಬಿಕೊಂಡರು.

ಈ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ,ಉದಯ್ ಗೌಡ,ದರ್ಶನ್ ಪುಟ್ಟಣ್ಣಯ್ಯ ,ದಿನೇಶ್ ಗೂಳಿಗೌಡ ,ಮೈಸುಗರ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಅಪಾರ ಮುಖ್ಯಕಾರ್ಯದರ್ಶಿ ಗೌರವಗುಪ್ತ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...