ತೆಲಂಗಾಣ | ಚುನಾವಣೆ ಘೋಷಣೆಗೂ ಮುನ್ನವೇ ಬಹುತೇಕ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಕೆಸಿಆರ್

Date:

ತೆಲಂಗಾಣ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಬಾಕಿ ಇರುವ ಮುನ್ನವೇ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ತಮ್ಮ ಬಿಆರ್‌ಎಸ್‌ ಪಕ್ಷದ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ತೆಲಂಗಾಣದ ಒಟ್ಟು 119 ಕ್ಷೇತ್ರಗಳಲ್ಲಿ 115 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆಗೊಳಿಸಲಾಗಿದೆ. ಬೋತ್, ಖಾನಾಪುರ, ವೈರಾ, ಕೋರುಟ್ಲಾ, ಉಪ್ಪಲ್, ಆಸಿಫಾಬಾದ್ ಮತ್ತು ಮೆಟ್ಪಲ್ಲಿ ಕ್ಷೇತ್ರಗಳಿಗೆ ಹೊಸಬರನ್ನು ಘೋಷಿಸಿರುವುದನ್ನು ಬಿಟ್ಟರೆ 108 ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕಿಳಿಸಲಾಗುತ್ತಿದೆ.

ಗೋಶಾಮಹಲ್, ನಾಂಪಲ್ಲಿ, ಜನಾಂವ್ ಮತ್ತು ನರಸಾಪುರ ಎಂಬ ನಾಲ್ಕು ಕ್ಷೇತ್ರಗಳಿಗೆ ಪಕ್ಷವು ಇನ್ನೂ ಅಭ್ಯರ್ಥಿಗಳನ್ನು ನಿರ್ಧರಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ – ತಮಿಳುನಾಡು ಕಾವೇರಿ ನದಿ ವಿವಾದ: ನೀರು ಹಂಚಿಕೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ

115 ಕ್ಷೇತ್ರಗಳ ಪೈಕಿ ಆರು ಮಹಿಳೆಯರಿಗೆ ಬಿಆರ್‌ಎಸ್ ಪಕ್ಷ ಟಿಕೆಟ್ ನೀಡಿದೆ. ಪದ್ಮಾ, ಜಿ. ಲಾಸ್ಯ, ನಂದಿತಾ, ಕೋವ ಲಕ್ಷ್ಮಿ, ಬಾನೋತ್ ಹರಿಪ್ರಿಯಾ ನಾಯ್ಕ್, ಬಡೇ ನಾಗಜ್ಯೋತಿ, ಮತ್ತು ಗೊಂಗಿಡಿ ಸುನೀತಾ ಅವರಿಗೆ ಕ್ರಮವಾಗಿ ಸಿಕಂದರಾಬಾದ್ ಕಂಟೋನ್ಮೆಂಟ್, ಆಸಿಫಾಬಾದ್, ಯಲ್ಲಂಡು, ಮುಲುಗು ಮತ್ತು ಅಲೈರ್‌ನಿಂದ ಟಿಕೆಟ್ ನೀಡಲಾಗಿದೆ. ರಾಜ್ಯದ 30 ಕ್ಷೇತ್ರಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್ 95-105 ಸ್ಥಾನಗಳನ್ನು ಗೆಲ್ಲಲಿದೆ. ಎಐಎಂಐಎಂ ಮತ್ತು ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿಯೊಂದಿಗೆ ಬಿಆರ್‌ಎಸ್ ಸ್ನೇಹ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್ ತಿಳಿಸಿದ್ದಾರೆ.

2018ರ ಚುನಾವಣೆಯಲ್ಲಿ 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಬಿಆರ್‌ಎಸ್ 88 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಕಾಂಗ್ರೆಸ್ ಮತ್ತು ಎಐಎಂಐಎಂ ಕ್ರಮವಾಗಿ 19 ಮತ್ತು 7 ಸ್ಥಾನಗಳನ್ನು ಗಳಿಸಿದ್ದವು. ಬಿಜೆಪಿ ಕೇವಲ 1 ಸ್ಥಾನವನ್ನು ಪಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...