ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕೆಇಎ ಪರೀಕ್ಷಾ ಅಕ್ರಮದ ಸೂತ್ರದಾರ ಆರ್.ಡಿ. ಪಾಟೀಲ್‌ ಬಂಧನ

Date:

ಕೆಇಎ ಪರೀಕ್ಷಾ ಅಕ್ರಮದ ಸೂತ್ರದಾರ ಎಂದು ಶಂಕಿಸಲಾಗಿರುವ ಆರ್.ಡಿ. ಪಾಟೀಲ್‌ನನ್ನು ಕಲಬುರಗಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.

ಮಹಾರಾಷ್ಟ್ರ-ಅಫಝಲಪುರ ಗಡಿ ಭಾಗದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಕಲಬುರಗಿ ಪೊಲೀಸರು ಇತ್ತೀಚೆಗೆ ಆತನ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ನಡೆಸಿದಾಗ ಕಾಂಪೌಂಡ್ ಹಾರಿ ಪರಾರಿಯಾಗಿದ್ದ. ಇದರ ವಿಡಿಯೋ ಸೋಷಿಯಲ್ ಮೀಡಿಯಾ ಸೇರಿ ಮಾಧ್ಯಮಗಳಲ್ಲೂ ಹರಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್.ಡಿ. ಪಾಟೀಲ್‌ ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲೂ ಭಾಗಿಯಾಗಿದ್ದ. ಇದೇ ರೀತಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಕೊನೆಗೆ ಮಹಾರಾಷ್ಟ್ರದಲ್ಲೇ ಸಿನಿಮೀಯ ರೀತಿಯಲ್ಲಿ ಪೊಲೀಸರಿಂದ ಬಂಧನಕ್ಕೂ ಒಳಗಾಗಿದ್ದ. ಹನ್ನೊಂದು ತಿಂಗಳು ಜೈಲಿನಲ್ಲಿದ್ದ ಆರೋಪಿ, ಕೊನೆಗೆ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧೆಯೂ ಮಾಡಿದ್ದ. ಹಲವು ರಾಜಕಾರಣಿಗಳ ಬೆಂಬಲವನ್ನೂ ಈತ ಹೊಂದಿದ್ದರಿಂದ ಕೆಇಎ ಪರೀಕ್ಷೆಯ ವೇಳೆ ಕೂಡ ಅಕ್ರಮ ನಡೆಸಿ, ಈತನೇ ಸೂತ್ರದಾರ ಎಂದು ಶಂಕಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...