ಅಬಕಾರಿ ನೀತಿ ಹಗರಣ | ಸಿಬಿಐ ಬಳಿ ಸಾಕ್ಷಿಯೇ ಇಲ್ಲವೆಂದ ಕೇಜ್ರಿವಾಲ್; ದೆಹಲಿಯಲ್ಲಿ ಹೈಡ್ರಾಮ

Date:

  • ಮೊದಲ ಬಾರಿಗೆ ಅರವಿಂದ್ ಕೇಜ್ರಿವಾಲ್‌ ವಿಚಾರಣೆ
  • ಆಪ್‌ ನಾಯಕರಿಂದ ಸಿಬಿಐ ನಡೆಗೆ ತೀವ್ರ ವಿರೋಧ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಮಾರು ಒಂಬತ್ತು ಗಂಟೆಗಳ ಕಾಲ ಸಿಬಿಐ ವಿಚಾರಣೆ ಎದುರಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ವಿಚಾರಣೆ ಖಂಡಿಸಿ, “ತನಿಖಾ ಸಂಸ್ಥೆಗಳು ಬಿಜೆಪಿಯ ತಾಳಕ್ಕೆ ಕುಣಿಯುತ್ತಿವೆ” ಎಂದು ಆರೋಪಿಸಿ ಆಪ್‌ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ಹಿಂದೆ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಆದರೆ, ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿರುವುದು ಇದೇ ಮೊದಲು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಅಧಿಕಾರಿಗಳು 56 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಕುರಿತು ಮಾತನಾಡಿದ ಕೇಜ್ರಿವಾಲ್, “ಅಧಿಕಾರಿಗಳು ನಯವಾಗಿ ಪ್ರಶ್ನಿಸಿದರು. ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರಿಸಿದೆ. ಅಬಕಾರಿ ನೀತಿಯನ್ನೇಕೆ ಜಾರಿಗೆ ತಂದಿರಿ. ಅದನ್ನು ಯಾವಾಗ ಸಿದ್ಧಪಡಿಸಲಾಗಿದೆ ಎಂಬೆಲ್ಲಾ ಪ್ರಶ್ನೆ ಕೇಳಿದರು. ಅವರ ಬಳಿ ಒಂದು ಚೂರು ಸಾಕ್ಷ್ಯಗಳಿಲ್ಲ” ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಬಿಐ ವಕ್ತಾರ ಆರ್‌ ಸಿ ವಕ್ತಾರ, “ಸೆಕ್ಷನ್ 160 ಸಿಆರ್‌ಪಿಸಿ ಅಡಿ ಕೇಜ್ರಿವಾಲ್‌ಗೆ ನೋಟಿಸ್ ನೀಡಲಾಗಿದೆ. ನಮ್ಮ ಬಳಿ ಇರುವ ಸಾಕ್ಷ್ಮಿಗಳನ್ನು ಒಂದೆಡೆ ಸಂಗ್ರಹಿಸಲಾಗುತ್ತಿದೆ. ತನಿಖೆ ಮುಂದುವರೆಯಲಿದೆ” ಎಂದು ತಿಳಿಸಿದ್ದಾರೆ.

ಸಿಬಿಐ ಕಚೇರಿಯಿಂದ ಕೇಜ್ರಿವಾಲ್ ಹೊರಬರುತ್ತಿದ್ದಂತೆಯೇ ಆಪ್ ನಾಯಕರು ಅವರನ್ನು ಸುತ್ತುವರೆದರು. “ನಾವು ಪ್ರಾಮಾಣಿಕರು. ಪ್ರಾಮಾಣಿಕತೆ ನಮ್ಮ ಮೂಲ ಸಿದ್ದಾಂತ. ನಾವು ಸಾಯುತ್ತೇವೆ ಹೊರತು ಭ್ರಷ್ಟಾಚಾರ ಮಾಡುವುದಿಲ್ಲ. ಆಪ್‌ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಕೇಂದ್ರ ಬಿಜೆಪಿ ಸರ್ಕಾರ ನಮಗೆ ತೊಂದರೆ ಕೊಡುತ್ತಿದೆ. ಇಡೀ ದೇಶದ ಜನರು ನಮ್ಮೊಂದಿಗಿದ್ದಾರೆ. ಆಪ್‌ ನಾಶ ಮಾಡುವುದು ಅಸಾಧ್ಯ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನು ಲಿಂಗಾಯತ ನಾಯಕ ಎನ್ನುವ ಕಾರಣಕ್ಕೆ ಕಡೆಗಣಿಸಿದರು: ಜಗದೀಶ್ ಶೆಟ್ಟರ್ಆಪ್

ಆಪ್‌ನಿಂದ ಬೃಹತ್ ಪ್ರತಿಭಟನೆ

ಅರವಿಂದ್ ಕೇಜ್ರಿವಾಲ್ ಅವರ ವಿಚಾರಣೆ ಖಂಡಿಸಿ ಆಪ್ ನಾಯಕರು ದೆಹಲಿಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. “ಬಿಜೆಪಿಯ ಆಜ್ಞೆಯಂತೆ ಸಿಬಿಐ ಕಾರ್ಯನಿರ್ವಹಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಸುಮಾರು 1350 ಆಪ್‌ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಪಂಜಾಬ್‌ನ ಸುಮಾರು 50-60 ನಾಯಕರು ಮತ್ತು ಮಂತ್ರಿಗಳನ್ನು ದೆಹಲಿಗೆ ಪ್ರವೇಶಿಸದಂತೆ ಸಿಂಘು ಮತ್ತು ಟಿಕ್ರಿ ಗಡಿಯಲ್ಲಿ ತಡೆಯಲಾಗಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಪ್ರವೇಶಕ್ಕೆ ಅನುಮತಿ ಪಡೆದವರನ್ನು ಹೊರ ದೆಹಲಿ ಅಥವಾ ದಕ್ಷಿಣ ದೆಹಲಿಯಲ್ಲಿ ಬಂಧಿಸಲಾಗಿದೆ.

ಪೊಲೀಸರು ಬಂಧಿಸುವ ಮೊದಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ರಾಜ್ಯಸಭಾ ಸಂಸದರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ, ಸೌರಭ್ ಭಾರದ್ವಾಜ್ ಮತ್ತು ಅತಿಶಿ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಗಾಲ್ಫ್ ಲಿಂಕ್ಸ್ ಪ್ರದೇಶದ ಬಳಿ ಧರಣಿ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...