ರಾಜ್ಯಸಭೆಗೆ ಕೇಜ್ರಿವಾಲ್?

Date:

ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಎಎಪಿ ರಾಜ್ಯಸಭಾ ಸಂಸದ ಸಂಜೀವ್‌ ಅರೋರಾ ಅವರಿಗೆ ಟಿಕೆಟ್‌ ನೀಡಲಾಗಿದೆ. ಹೀಗಾಗಿ, ಅವರು ಗೆದ್ದರೆ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಆ ಹುದ್ದೆಗೆ ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಆಯ್ಕೆಯಾಗುವ ಸಾಧ್ಯತೆ ಇದೆ ಎಂಧು ಹೇಳಲಾಗುತ್ತಿದೆ.

ಲುಧಿಯಾನ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರು ಕಳೆದ ತಿಂಗಳು ಸಾವನ್ನಪ್ಪಿದ್ದರು. ಹೀಗಾಗಿ, ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಇನ್ನೂ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿಲ್ಲ. ಆದಾಗ್ಯೂ, ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಎಎಪಿ ಫೋಷಿಸಿದೆ. ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾಗೆ ಟಿಕೆಟ್ ನೀಡಿದೆ.

ಸಂಜೀವ್ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆ, ರಾಜ್ಯಸಭೆಗೆ ಕೇಜ್ರಿವಾಲ್ ಆಯ್ಕೆಯಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು, ಅನುಮಾನಗಳು ವ್ಯಕ್ತವಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್ ಮಾಡಿರುವ ಪಂಜಾಬ್‌ನ ಕಾಂಗ್ರೆಸ್‌ ಶಾಸಕ ಸುಖಪಲ್ ಸಿಂಗ್ ಖೈರಾ, “ಕೇಜ್ರಿವಾಲ್ ರಾಜ್ಯಸಭೆಗೆ ಪ್ರವೇಶಿಸುವುದು ಖಚಿತ” ಎಂದು ಹೇಳಿದ್ದಾರೆ. “ಅರೋರಾ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ಅಥವಾ ಮನೀಶ್ ಸಿಸೋಡಿಯಾ ಆಯ್ಕೆಯಾಗುವ ಸಾಧ್ಯತೆಯಿದೆ” ಎಂದು ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದೆ. ಎಎಪಿಯ ಘಟಾನುಘಟಿ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಷ್ ಸಿಸೋಡಿಯಾ ಸೇರಿದಂತೆ ಹಲವರು ಸೋತಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೇಜ್ರಿವಾಲ್, ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸೋಲುಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...