ಕೆರಗೋಡು ಧ್ವಜ ವಿವಾದ | ಪ್ರತಿಭಟನೆಗೆ ಕುಮಾರಸ್ವಾಮಿ ಬರುತ್ತಿದ್ದಂತೆಯೇ ಕಾಲ್ಕಿತ್ತ ಬಿಜೆಪಿ ಮುಖಂಡರು!

Date:

ಮುಂದಿನ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಸೀಟು ಹಂಚಿಕೆ ಮಾತುಕತೆ ಮುಂದುವರಿದಿದೆ. ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಗೂ ಸುಮಲತಾಗೆ ಬೆಂಬಲ ಸೂಚಿಸುತ್ತಿರುವ ಬಿಜೆಪಿಯ ಕೆಲವು ನಾಯಕರು ಹಾಗೂ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದು ಮಂಡ್ಯದ ಕೆರಗೋಡು ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು ನಡೆದ ಪ್ರತಿಭಟನೆಯ ವೇಳೆ ಬಹಿರಂಗಗೊಂಡಿದೆ. ಅದಕ್ಕೆ ಕಾರಣವಾದದ್ದು, ಕೆಲ ಬಿಜೆಪಿ ಮುಖಂಡರ ನಡೆ.

ಮಂಡ್ಯ ಕ್ಷೇತ್ರದ ಟಿಕೆಟ್​ಗಾಗಿ ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವೆ ಪೈಪೋಟಿ ನಡೆಯುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಉಂಟಾಗಿರುವುದನ್ನು ಸೂಚಿಸಿದೆ.

ಮಂಡ್ಯದ ಕೆರಗೋಡು ಗ್ರಾಮದಲ್ಲಿನ ಹನುಮಧ್ವಜ ವಿವಾದವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿಯು ರಾಜ್ಯಾದ್ಯಂತ ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿಯೇ ಬಿಜೆಪಿಯ ದೋಸ್ತಿ ಜೆಡಿಎಸ್ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಆದರೆ, ಪ್ರತಿಭಟನಾ ಸ್ಥಳಕ್ಕೆ ಕುಮಾರಸ್ವಾಮಿ ಆಗಮಿಸುತ್ತಿದ್ದಂತೆ ಕೆಲವು ಬಿಜೆಪಿ ನಾಯಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಕುಮಾರಸ್ವಾಮಿ ವೇದಿಕೆಗೆ ಆಗಮಿಸುತ್ತಿದ್ದಂತೆ ನೆರೆದಿದ್ದ ಪ್ರತಿಭಟನಾಕಾರರು ಶಿಳ್ಳೆ, ಚಪ್ಪಾಳೆ ಮೂಲಕ ಘೋಷಣೆ ಕೂಗತೊಡಗಿದರು. ಬಿಜೆಪಿ ಮುಖಂಡರೊಬ್ಬರು ಕುಮಾರಸ್ವಾಮಿ ಅವರಿಗೆ ಕೇಸರಿ ಶಾಲು ಹಾಕಿದರು. ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಶಾಸಕ ಸಿಟಿ ರವಿ ಅವರು ವೇದಿಕೆಗೆ ಆಹ್ವಾನಿಸಿದರು. ಈ ವೇಳೆ ಕುಮಾರಸ್ವಾಮಿ ಬರುವುದನ್ನು ಗಮನಿಸಿದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ಬೆಳವಣಿಗೆಯು ಮೈತ್ರಿಯಲ್ಲಿ ಉಂಟಾಗಿರುವ ಬಿರುಕಿಗೆ ಇಂಬು ನೀಡಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಯೋಚನೆಯಲ್ಲಿದೆ. ಆದರೆ, ಇದಕ್ಕೆ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರು ಒಪ್ಪುತ್ತಿಲ್ಲ. ಮಂಡ್ಯ ಕ್ಷೇತ್ರದ ಟಿಕೆಟ್  ಸುಮಲತಾ ಅವರಿಗೇ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸದೆ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು. ಮಂಡ್ಯವನ್ನ ಜೆಡಿಎಸ್ ನಾಯಕರಿಗೆ ಯಾಕೆ ಕೊಡಬೇಕು ಎಂದು ನಾರಾಯಣಗೌಡ ಇತ್ತೀಚೆಗೆ ಬಹಿರಂಗ ಹೇಳಿಕೆ ನೀಡಿದ್ದರು. ಅಲ್ಲದೆ, ಜನವರಿ 25 ರಂದು ಸುಮಲತಾರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಈ ವೇಳೆ ಬಿಜೆಪಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಸುಮಲತಾ ಅಂಬರೀಶ್ ತೀರ್ಮಾನ ತೆಗೆದುಕೊಂಡಿದ್ದಾರೆ. ಅಲ್ಲದೇ, ಮಂಡ್ಯ ಬಿಟ್ಟು ನನಗೆ ಬೇರೆ ಕಡೆ ಟಿಕೆಟ್‌ ನೀಡಿದರೆ ರಾಜಕೀಯವೇ ಬೇಡ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...