ಕೆರಗೋಡು ಧ್ವಜ ವಿವಾದ | ಅಜೆಂಡಾ ಸಾಧಿಸಲು ಬಿಜೆಪಿಯಿಂದ ಅನಗತ್ಯ ಸಮಸ್ಯೆ ಸೃಷ್ಟಿ: ಸಿಎಂ ಸಿದ್ದರಾಮಯ್ಯ

Date:

ಮಂಡ್ಯ ಕೆರಗೋಡು ಹನುಮಧ್ವಜ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಘಟನೆಗೆ ಸಂಬಂಧಿಸಿದಂತೆ ತಮ್ಮ ಅಜೆಂಡಾ ಸಾಧಿಸಲು ಬಿಜೆಪಿಯವರು ಅನಗತ್ಯ ಸಮಸ್ಯೆ ಸೃಷ್ಟಿ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಅವರು ಇಂದು ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ನಾನೂ ಒಬ್ಬ ಹಿಂದೂ. ಎಲ್ಲ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದು ಸಿಎಂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಪ್ರಚೋದನೆ ಮಾಡುತ್ತಿದ್ದಾರೆ. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದರೆ, ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ” ಎಂದು ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಿದರು.

ಇದನ್ನು ಓದಿದ್ದೀರಾ? ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ. ಅದಕ್ಕೆ ಈ ರೀತಿ ಹೇಳುತ್ತಾರೆ ಅಷ್ಟೇ” ಎಂದು ಸಿಎಂ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...