ಇಸ್ರೇಲ್ ಸಚಿವರಿಗೆ ಆತಿಥ್ಯ; ಮೋದಿ ಸರ್ಕಾರದ ವಿರುದ್ಧ ಕೇರಳ ಸಿಎಂ ಕಿಡಿ

Date:

ಕಳೆದ ಎರಡು ವರ್ಷಗಳಿಂದ ಗಾಜಾ ಪಟ್ಟಿಯ ಮೇಲೆ ನಿರಂತರ ದಾಳಿ ನಡೆಸಿ, 65,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಂದಿರುವ ಇಸ್ರೇಲ್‌ಅನ್ನು ಹಲವು ರಾಷ್ಟ್ರಗಳು ಖಂಡಿಸುತ್ತಿವೆ. ಆದರೆ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದ ವಿಚಾರವಾಗಿ ಭಾರತ ಸರ್ಕಾರವು ತಟಸ್ಥ ನಿಲುವು ತಳೆದಿತ್ತು. ಇದೀಗ, ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರು ದೆಹಲಿಗೆ ಭೇಟಿ ನೀಡಿದ್ದಾರೆ. ಅವರಿಗೆ ಕೇಂದ್ರ ಸರ್ಕಾರವು ಆತಿಥ್ಯ ವಹಿಸಿದೆ. ಈ ಕಾರಣಕ್ಕಾಗಿ, ಕೇಂದ್ರ ಸರ್ಕಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ.

ಇಸ್ರೇಲ್ ಸಚಿವರಿಗೆ ಆತಿಥ್ಯ ನೀಡಿದ್ದನ್ನು ಖಂಡಿಸಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿಜಯನ್, “ಸ್ಮೋಟ್ರಿಚ್ ಅವರನ್ನು ತೀವ್ರ ಬಲಪಂಥೀಯ ಉಗ್ರಗಾಮಿ. ಇಸ್ರೇಲ್‌ನ ಕ್ರೂರ ಆಕ್ರಮಣ ಮತ್ತು ವಿಸ್ತರಣಾವಾದಿ ಕಾರ್ಯಸೂಚಿಯ ಮುಖ್ಯಸ್ಥ” ಎಂದು ಬಣ್ಣಿಸಿದ್ದಾರೆ.

“ಗಾಜಾದಲ್ಲಿ ನರಮೇಧ ನಡೆಯುತ್ತಿರುವ ಸಮಯದಲ್ಲಿ, ನೆತನ್ಯಾಹು ಆಡಳಿತದ ಪ್ರತಿನಿಧಿಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವುದು ಪ್ಯಾಲೆಸ್ತೀನ್‌ನೊಂದಿಗಿನ ಭಾರತದ ಐತಿಹಾಸಿಕ ಒಗ್ಗಟ್ಟಿಗೆ ದ್ರೋಹವಾಗಿದೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಭಾರತ-ಚೀನಾ-ರಷ್ಯಾ ದೋಸ್ತಿ: ಅಮೆರಿಕದ ನಿಲುವೇನು?

ಪ್ಯಾಲೆಸ್ತೀನ್‌ಗೆ ನ್ಯಾಯಯುತ ಮತ್ತು ಶಾಶ್ವತ ಶಾಂತಿಯ ಹಾದಿಯನ್ನು ಅನುಸರಿಸದೆ ಇರುವಾಗ ಇಸ್ರೇಲ್‌ನೊಂದಿಗೆ ಮಿಲಿಟರಿ, ಭದ್ರತೆ ಮತ್ತು ಆರ್ಥಿಕ ಸಂಬಂಧಗಳನ್ನು ಕಾಪಾಡಿಕೊಳ್ಳುವುದು ಶೋಚನೀಯ ಎಂದು ಎಡಪಂಥೀಯ ಅನುಭವಿ ಹೇಳಿದರು.

ಸ್ಮೋಟ್ರಿಚ್ ಸೆಪ್ಟೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಅವರು ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಉಭಯ ದೇಶಗಳಲ್ಲಿ ಹೂಡಿಕೆಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಗುರಿಯೊಂದಿಗೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...