ಕೇರಳ ಚುನಾವಣೆ | ಮುಸ್ಲಿಂ ಮತದಾರರನ್ನು ಪ್ರಭಾವಿಸುವುದೇ ಮುಸ್ಲಿಯಾರ್-ಮೋದಿ ಭೇಟಿ?

Date:

ಕೇರಳ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇವೆ. ಏಪ್ರಿಲ್‌ ತಿಂಗಳಿನಲ್ಲಿ ಚುನವಣೆ ನಡೆಯುವ ಸಾಧ್ಯತೆ ಇದೆ. ಚುನಾವಣೆಗಾಗಿ ಆಡಳಿತಾರೂಢ ಎಲ್‌ಡಿಎಫ್‌ ಮೈತ್ರಿಕೂಟ ಮತ್ತು ವಿಪಕ್ಷಗಳ ಮೈತ್ರಿಕೂಟ ಯುಡಿಎಫ್‌ಗಳು ಭಾರೀ ತಯಾರಿ ನಡೆಸುತ್ತಿವೆ. ಯುಡಿಎಫ್‌ನ ನೇತೃತ್ವ ವಹಿಸಿರುವ ಕಾಂಗ್ರೆಸ್‌, ಚುನಾವಣೆಗಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಂಡವನ್ನೂ ರಚಿಸಿದೆ. ಇನ್ನು, ಕೇಂದ್ರದಲ್ಲಿ ಮೂರು ಅವಧಿಯಿಂದ ಅಧಿಕಾರದಲ್ಲಿರುವ ಬಿಜೆಪಿ, ಕೇರಳದಲ್ಲಿ ಹೇಗಾದರೂ ಖಾತೆ ತೆರೆಯಬೇಕೆಂದು ಹವಣಿಸುತ್ತಿದೆ. ನಾನಾ ತಂತ್ರಗಳನ್ನು ಹೆಣೆಯುತ್ತಿದೆ.

ಇದೇ ಸಂದರ್ಭದಲ್ಲಿ ಕೇರಳದ ಸುನ್ನಿ ನಾಯಕ, ‘ಕೇರಳ ಜಮಿಯ್ಯತುಲ್ ಉಲಮಾ’ದ ಮುಖ್ಯಸ್ಥ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿಯು ಕೇರಳ ರಾಜಕೀಯದ ಗಮನ ಸೆಳೆದಿದೆ. ಚುನಾವಣಾ ಸಮಯದಲ್ಲಿ ಮಹತ್ವ ಪಡೆದುಕೊಂಡಿದೆ.

ಮುಸ್ಲಿಯಾರ್ ಮತ್ತು ಮೋದಿ ಸುಮಾರು ಅರ್ಧಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಅವರ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇರಳ ಜಮಿಯ್ಯತುಲ್ ಉಲಮಾ ಕಾರ್ಯದರ್ಶಿ ಪೆರೋಡ್ ಅಬ್ದುರಹ್ಮಾನ್ ಸಖಾಫಿ ಹಾಗೂ SYS ಅಧ್ಯಕ್ಷ ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝರಿ ಕೂಡ ಇದ್ದರು.  ಸಭೆಯಲ್ಲಿ ಸಾಮಾಜಿಕ, ಮಾನವೀಯ, ಶೈಕ್ಷಣಿಕ ವಿಚಾರಗಳ ಕುರಿತು ಚರ್ಚೆಗಳು ನಡೆದಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಕೇರಳದಲ್ಲಿ ಮುಸ್ಲಿಯಾರ್ ಅವರು ‘ಮಾನವೀಯತಾ ಯಾತ್ರೆ’ ನಡೆಸಿದ್ದರು. ಯಾತ್ರೆಯಲ್ಲಿ ವಿವಿಧ ವರ್ಗಗಳಿಂದ ಸಂಗ್ರಹಿಸಿದ ಆಂತಕ ಮತ್ತು ಬೇಡಿಕೆಗಳ ಕುರಿತು ಪ್ರಧಾನಿಗೆ ವರದಿ ನೀಡಿದ್ದಾರೆ. ಅಲ್ಲದೆ, ವಖ್ಫ್ ಮತ್ತು ಎಸ್‌ಐಆರ್‌ ಸಂಬಂಧಿತ ಆತಂಕಗಳು, ಮಸೀದಿಗಳ ಪುರಾತ್ತಾನ, ಇಸ್ಲಾಮಿಕ್ ಪೈತೃಕ ಸ್ಮಾರಕಗಳ ಸಂರಕ್ಷಣೆ, ಮೌಲಾನಾ ಆಜಾದ್ ನ್ಯಾಷನಲ್ ಫೆಲೋಶಿಪ್, ಅಲಿಗಢ್ ಮುಸ್ಲಿಂ ಯೂನಿವರ್ಸಿಟಿಯ ಮಲಪ್ಪುರಂ ಕ್ಯಾಂಪಸ್ ಅಭಿವೃದ್ಧಿ ಸೇರಿದಂತೆ ನಾನಾ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದು ಹೇಳಲಾಗಿದೆ.

ಇನ್ನು, ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಸ್ಲಿಯಾರ್, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ, ಯಾವುದೇ ಸಮಸ್ಯೆ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಭೇಟಿ ಕುರಿತು ಪ್ರಧಾನಿ ಮೋದಿ ಕೂಡ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, “ಉತ್ತಮ ಸಂವಾದ ನಡೆದಿದೆ. ಜಮಿಯ್ಯತುಲ್ ಉಲಮಾ ಮತ್ತು ಜಾಮಿಯಾ ಮರ್ಕಝ್ ನೇತೃತ್ವದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಗಳನ್ನು ಪ್ರಶಂಸನೀಯ. ಇಂತಹ ಪ್ರಯತ್ನಗಳು ಸಮಾಜದ ಪ್ರಗತಿಗೆ ಮತ್ತು ಭಾರತದ ಅಂತರರಾಷ್ಟ್ರೀಯ ಖ್ಯಾತಿಗೆ ಕೊಡುಗೆ ನೀಡುತ್ತಿವೆ. ಮುಸ್ಲಿಯಾರ್ ಅವರ ಸಾಮಾಜಿಕ ಸಾಮರಸ್ಯ, ಸಹೋದರತ್ವ ಹಾಗೂ ಶಿಕ್ಷಣ ಸುಧಾರಣೆಗೆ ಮಾಡುತ್ತಿರುವ ಕೊಡುಗೆಗಳು ಸ್ಪೂರ್ತಿದಾಯಕ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಬಾಂಗ್ಲಾದೇಶ | ದೇಶದ ಉದಯವನ್ನೇ ವಿರೋಧಿಸಿದ್ದ ಪಕ್ಷಕ್ಕೆ ಪ್ರತಿಪಕ್ಷ ಸ್ಥಾನ

ಮುಸ್ಲಿಯಾರ್ ಅವರು ರಾಜಕೀಯ ಪಕ್ಷಗಳಲ್ಲಿ ತೊಡಗಿಸಿಕೊಳ್ಳದಿದ್ದರೂ, ಕೇರಳ ರಾಜಕೀಯದಲ್ಲಿ ಅವರ ಪ್ರಭಾವ ಅತ್ಯಂತ ಗಣನೀಯವಾಗಿದೆ. ಅವರು ಸಮಸ್ತ ಕೇರಳ ಜಮಿಯ್ಯತುಲ್ ಉಲಮಾದ ಜನರಲ್ ಸೆಕ್ರಟರಿ, ಜಾಮಿಯಾ ಮರ್ಕಝ್ ಸಂಸ್ಥೆಯ ಪ್ರಮುಖ ನಾಯಕ ಹಾಗೂ ಭಾರತದ 10ನೇ ಗ್ರ್ಯಾಂಡ್ ಮುಫ್ತಿ ಕೂಡ ಆಗಿದ್ದಾರೆ. ಈ ಹಿಂದೆ ಸಿಎಎ ವಿರೋಧಿ ಹೋರಾಟದಲ್ಲಿಯೂ ಅವರು ಮುಂಚೂಣಿಯಲ್ಲಿದ್ದರು. ಯೆಮನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯ ಅವರ ಬಿಡುಗಡೆಯಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಗಮನಾರ್ಹವಾಗಿ, ಅವರು ಬಾಬರಿ ಮಸೀದಿ ತೀರ್ಪು ಬಂದಾಗ, ಆ ತೀರ್ಪನ್ನು ಸ್ವಾಗತಿಸಿದ್ದರು. ಉತ್ತರ ಕೇರಳದ ಮಲಬಾರ್ ಪ್ರದೇಶದಲ್ಲಿ ಅವರ ಪ್ರಭಾವ ಹೆಚ್ಚಾಗಿದ್ದು, ಮುಸ್ಲಿಂ ಸಮುದಾಯದ ಜನರು ಅವರ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುತ್ತಾರೆ.

ಕೇರಳದಲ್ಲಿ ಮುಸ್ಲಿಂ ಮತದಾರರು ಸುಮಾರು 26-28% ಇದ್ದು, ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. UDF ಮತ್ತು LDF ನಡುವಿನ ಸ್ಪರ್ಧೆಯಲ್ಲಿ BJP ಚಿಗುರುವ ಪ್ರಯತ್ನದಲ್ಲಿದೆ. ಚುನಾವಣೆಗೂ ಮುಂಚಿತವಾಗಿ ನಡೆದ ಈ ಭೇಟಿಯು ಕೇರಳದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯುವ ಬಿಜೆಪಿಯ ಪ್ರಯತ್ನದ ಭಾಗವಾಗಿದೆ ಎಂದು ಹೇಳಲಾಗುತ್ತಿದೆ. ಮೋದಿ ಮತ್ತು ಮುಸ್ಲಿಯಾರ್ ಅವರ ಭೇಟಿಯನ್ನು ಬಿಜೆಪಿ ಪರವಾದ ಸಾಮಾಜಿಕ ಜಾಲತಾಣ ಖಾತೆಗಳು ಸಂಭ್ರಮಿಸುತ್ತಿವೆ. ಕೇರಳ ಬದಲಾಗುತ್ತಿದೆ ಎಂದು ಹೇಳಿಕೊಂಡಿವೆ. ಕೇರಳ ಮುಸ್ಲಿಮರನ್ನು ಸೆಳೆಯಲು ಬಿಜೆಪಿ ನಡೆಸುತ್ತಿರುವ ತಂತ್ರವೆಂದೂ ಹಲವರು ಬಣ್ಣಿಸಿದ್ದಾರೆ.  ಆದಾಗ್ಯೂ, ಮುಸ್ಲಿಯಾರ್ ಮತ್ತು ಮೋದಿ ಭೇಟಿಯು ಮತದಾನದಲ್ಲಿ ಮುಸ್ಲಿಂ ಮತಗಳನ್ನು ಚದುರಿಸುವ ಸಾಧ್ಯತೆ ಸದ್ಯಕ್ಕಿಲ್ಲವೆಂದೂ ವಿಮರ್ಷಕರು ಭಾವಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...