ಕೇರಳ ಈಗ ಕೇರಳಂ: ಕೇರಳಿಗರು ‘ಕೇರಳಮೈಟ್’, ‘ಕೇರಳಮೈನ್’ ಎಂದು ಶಶಿತರೂರ್ ವ್ಯಂಗ್ಯ

Date:

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಕೇರಳದ ಹೆಸರನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡುವ ಕೇರಳ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದೆ. ಇನ್ನುಮುಂದೆ, ಕೇರಳವು ಕೇರಳಂ ಆಗಲಿದೆ.

ಈ ಹೆಸರು ಬದಲಾವಣೆಗೆ ಪ್ರತಿಕ್ರಿಯಿಸಿದ ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್, “ಇಂಗ್ಲಿಷ್ ಮಾತನಾಡುವವರು ಈಗ ರಾಜ್ಯದ ನಿವಾಸಿಗಳನ್ನು ಏನೆಂದು ಕರೆಯುತ್ತಾರೆ? ‘ಕೇರಲೈಟ್’ ಮತ್ತು ‘ಕೇರಳನ್’ ಪದಗಳಿಗೆ ಈಗ ಏನಾಗುತ್ತದೆ? ‘ಕೇರಳಮೈಟ್’ ಎಂದು ಕರೆಯಲಾಗುತ್ತದೆಯೇ? ‘ಕೇರಳಮೈಟ್’ ಒಂದು ಸೂಕ್ಷ್ಮಜೀವಿಯಂತೆ ಧ್ವನಿಸುತ್ತದೆ. ಅಂತೆಯೇ, ‘ಕೇರಳಮೈನ್’ ಪದವು ಅಪರೂಪದ ಭೂಮಿಯ ಖನಿಜದಂತೆ ಧ್ವನಿಸುತ್ತದೆ…!” ಎಂದಿದ್ದಾರೆ.

“ಒಳ್ಳೆಯದಾಗಲಿ, ಕೇರಳ ಮುಖ್ಯಮಂತ್ರಿಗಳು ಚುನಾವಣೆಗಾಗಿ ಹೊಸ ಪದಗಳ ಸ್ಪರ್ಧೆಯನ್ನು ಪ್ರಾರಂಭಿಸಲು ಬಯಸಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದ ಹೆಸರನ್ನು ಕೇರಳಂ ಎಂದು ಮರುನಾಮಕರಣ ಮಾಡಲು 2024ರ ಜೂನ್ 24ರಂದು ಕೇರಳ ಸರ್ಕಾರವು ಸಲ್ಲಿಸಿದ್ದ ಪ್ರಸ್ತಾಪವನ್ನು ಬರೋಬ್ಬರಿ 2 ವರ್ಷಗಳ ನಂತರ ಕೇಂದ್ರ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ. ಕೆಲವೇ ವಾರಗಳಲ್ಲಿ (ಏಪ್ರಿಲ್-ಮೇ) ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಕೇಂದ್ರ ಸರ್ಕಾರವು ಹೆಸರು ಬದಲಾವಣೆಗೆ ಅನುಮೋದಿಸಿದೆ.

2024ರ ಜೂನ್‌ನಲ್ಲಿ ನಡೆದಿದ್ದ ಕೇರಳ ರಾಜ್ಯ ಅಧಿವೇಶನದಲ್ಲಿ ಈ ನಿರ್ಣಯವನ್ನು ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ರಾಜ್ಯವನ್ನು ಮಲಯಾಳಂನಲ್ಲಿ ‘ಕೇರಳಂ’ ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟಕ್ಕೂ ಹಿಂದಿನಿಂದಲೂ ಏಕೀಕೃತ ಕೇರಳಕ್ಕಾಗಿ ಮಲಯಾಳಂ ಮಾತನಾಡುವ ಜನರ ಬೇಡಿಕೆಯಿದೆ. ಆದರೆ, ನಮ್ಮ ರಾಜ್ಯದ ಹೆಸರನ್ನು ಸಂವಿಧಾನದಲ್ಲಿ ಕೇರಳ ಎಂದು ಬರೆಯಲಾಗಿದೆ. ಸಂವಿಧಾನದ 3ನೇ ವಿಧಿಯ ಅಡಿಯಲ್ಲಿ ಅದನ್ನು ‘ಕೇರಳಂ’ ಎಂದು ತಿದ್ದುಪಡಿ ಮಾಡಬೇಕು ಮತ್ತು ಸಂವಿಧಾನದ 8ನೇ ಭಾಗದಲ್ಲಿ ಉಲ್ಲೇಖಿಸಲಾದ ಎಲ್ಲ ಭಾಷೆಗಳಲ್ಲಿ ಅದನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡಬೇಕು” ಎಂದು ಒತ್ತಾಯಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...