ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿಯಿಂದ ದರ ಏರಿಕೆ: ಸಚಿವ ಕೆ.ಜೆ.ಜಾರ್ಜ್‌

Date:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್‌ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ದರ ಹೆಚ್ಚಿಸಿ ಆದೇಶ ಹೊರಡಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಮ್ಮ ಸರ್ಕಾರ ವಿದ್ಯುತ್‌ ದರವನ್ನು ಏರಿಸಿಲ್ಲ. ಯೂನಿಟ್‌ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್‌ ದರದ ಏರಿಕೆ ಅಲ್ಲ. ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆ ಏರಿಸಿದೆ” ಎಂದರು.

“ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ‌ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‌ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರ್ಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ ಪ್ರಸ್ತಾವನೆಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಹೊಸ ಆದೇಶ ಹೊರಡಿಸಿದೆ”ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹರಕರಿಂದ ಪಡೆಯುವ ಪ್ರಸ್ತಾವನೆಯನ್ನು ಪ್ರಶ್ನಿಸಿ ಎಫ್‌ಕೆಸಿಸಿಐ ಹೈಕೋರ್ಟ್‌ಗೆ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಹೈಕೋರ್ಟ್‌ 2024ರ ಮಾರ್ಚ್‌ 25ರಂದು ತಿರಸ್ಕರಿಸಿತ್ತು. ಹೈಕೋರ್ಟ್‌ ಆದೇಶವನ್ನು ಮುಂದಿಟ್ಟುಕೊಂಡು 2024ರ ನವೆಂಬರ್‌ 30ರಂದು ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳು ಮತ್ತೆ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಿದ್ದವು. ಅದನ್ನು ಪುರಸ್ಕರಿಸಿ ಕೆಇಆರ್‌ಸಿ ಆದೇಶ ಹೊರಡಿಸಿದೆ” ಎಂದು ವಿವರಿಸಿದರು.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ವಿದ್ಯುತ್‌ ಸುಧಾರಣಾ ನಿಯಮಗಳಿಗೆ 2022ರಲ್ಲಿ ತಿದ್ದುಪಡಿ ತರಲಾಗಿತ್ತು. ಕಪಿಟಿಸಿಎಲ್‌ ಮತ್ತು ಎಸ್ಕಾಂಗಳ ಸಿಬ್ಬಂದಿಯ ಪಿಂಚಣಿ, ಗ್ರಾಚ್ಯುಟಿಯ ಪಾಲನ್ನು ಗ್ರಾಹಕರಿಂದ ಪಡೆಯಲು ಕೆಇಆರ್‌ಸಿ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ತಿದ್ದುಪಡಿಯಲ್ಲಿ ಹೇಳಲಾಗಿತ್ತು. ಇದರ ಆಧಾರದ ಮೇಲೆ ಮತ್ತು ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿ ದರ ಹೆಚ್ಚಳ ಮಾಡಿದೆ”ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...