ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

Date:

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮೋದಿ ಅವರಿಗೆ ತಿಳಿಹೇಳಲು ಮುಂದಾಗಿದ್ದಾರೆ. ಮೋದಿ ಭೇಟಿಗೆ ಸಮಯ (ಅಪಾಯಿಂಟ್ಮೆಂಟ್‌) ಕೇಳಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ್ದ ಮೋದಿ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತನ್ನು ‘ಒಳನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ’ ಹಂಚಬಹುದು. ಈ ಹಿಂದೆ ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ, ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದಿದ್ದರು. ಈ ಅರ್ಬನ್ ನಕ್ಸಲ್ ಚಿಂತನೆಯು ನನ್ನ ತಾಯಂದಿರು ಮತ್ತು ಸಹೋದರಿಯರ ಮಂಗಳ ಸೂತ್ರಗಳನ್ನು ಸಹ ಬಿಡುವುದಿಲ್ಲ” ಎಂದು ಆರೋಪಿಸಿದ್ದರು.

ಪ್ರಧಾನಿ ಮೋದಿಯವರ ಟೀಕೆಗಳನ್ನು ‘ದ್ವೇಷ’ ಎಂದು ಖರ್ಗೆ ಬಣ್ಣಿಸಿದ್ದಾರೆ. “ಮೋದಿ ಮಾತುಗಳು ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ತಂತ್ರವಾಗಿದೆ. ಅವರ ಮಾತುಗಳು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ ಮೋದಿ ಮತ್ತು ಬಿಜೆಪಿ ‘ಭೀತಿ’ ಮತ್ತು ‘ನಿರಾಶೆ’ಗೊಂಡಿದೆ ಎಂಬುದನ್ನು ಸೂಚಿಸುತ್ತದೆ. ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ‘ಮುಸ್ಲಿಂ ಮತ್ತು ಹಿಂದು’ ಪದಗಳ ಉಲ್ಲೇಖವೇ ಇಲ್ಲ” ಎಂದು ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಕ್ಕಾಗಿ ಸುಳ್ಳುಗಳನ್ನು ಹೇಳುವುದು ಮತ್ತು ವಿಪಕ್ಷಗಳ ಮೇಲೆ ಸುಳ್ಳು ಆರೋಪಗಳನ್ನು ಮಾಡಲು ಆಧಾರರಹಿತ ಉಲ್ಲೇಖಗಳನ್ನು ಮಾಡುವುದು ಸಂಘ ಮತ್ತು ಬಿಜೆಪಿಯ ವಿಶೇಷತೆಯಾಗಿದೆ. ಈ ದೇಶದ 140 ಕೋಟಿ ಜನರು ಈ ಸುಳ್ಳನ್ನು ನಂಬುವುದಿಲ್ಲ. ನಮ್ಮ ಪ್ರಣಾಳಿಕೆ ಪ್ರತಿಯೊಬ್ಬ ಭಾರತೀಯನದ್ದು… ಎಲ್ಲರಿಗೂ ಸಮಾನತೆ ಮತ್ತು ನ್ಯಾಯದ ಬಗ್ಗೆ ಮಾತನಾಡುತ್ತದೆ…ಕಾಂಗ್ರೆಸ್‌ನ ನ್ಯಾಯ ಪತ್ರವು ಆಧಾರ ಸತ್ಯವಾಗಿದೆ. ಆದರೆ, ಮೋದಿ ಅವರು ಗೊಬೆಲ್ಸ್ ರೂಪದಲ್ಲಿ ತತ್ತರಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮೋದಿಯವರ ಈ ಹೇಳಿಕೆ ಹಲವು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “2002ರಿಂದ, ಮುಸ್ಲಿಮರನ್ನು ನಿಂದಿಸಿ ಮತ ಪಡೆಯುವುದು ಮಾತ್ರ ಮೋದಿ ಗ್ಯಾರಂಟಿ” ಎಂದು ಹೇಳಿದ್ದಾರೆ.

ಶಿವಸೇನೆಯ (ಉದ್ದವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ಮೋದಿ ಭಾಷಣವನ್ನು ‘ಅತ್ಯಂತ ದ್ವೇಷಪೂರಿತ ಮತ್ತು ವಿಭಜನೆ’ ಭಾಷಣೆ ಎಂದು ಕರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...