ಕೆಎಚ್‌ಐಆರ್‌ ಸಿಟಿ ಅಭಿವೃದ್ಧಿ | ದಕ್ಷಿಣ ಕೊರಿಯಾ ನಿಯೋಗದೊಂದಿಗೆ ರಾಜ್ಯ ನಿಯೋಗ ಚರ್ಚೆ

Date:

ಬೆಂಗಳೂರು ಬಳಿ ಅಸ್ತಿತ್ವಕ್ಕೆ ಬರಲಿರುವ ಜ್ಞಾನ, ಆರೋಗ್ಯ, ಆವಿಷ್ಕಾರ ಮತ್ತು ಸಂಶೋಧನಾ ನಗರದ (ಕೆಎಚ್‌ಐಆರ್‌ ಸಿಟಿ) ಅಭಿವೃದ್ಧಿಗೆ ಸಂಬಂಧಿಸಿದಂತೆ ದಕ್ಷಿಣ ಕೊರಿಯಾದ ಜಿಯೊಂಗಿ ಪ್ರಾಂತ್ಯದ ಜೊತೆಗಿನ ಸಹಯೋಗದ ಸಾಧ್ಯತೆಗಳ ಬಗ್ಗೆ ರಾಜ್ಯದ ನಿಯೋಗವು ಗುರುವಾರ ಫಲಪ್ರದ ಸಮಾಲೋಚನೆ ನಡೆಸಿತು.

ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಜಿಯೊಂಗಿ ಪ್ರಾಂತ್ಯದ ಉಪ ರಾಜ್ಯಪಾಲ ಹಿಯುನ್‌ ಗೊನ್‌ ಕಿಮ್‌ ಅವರನ್ನು ಭೇಟಿಯಾಗಿತ್ತು.

‘ಎಲೆಕ್ಟ್ರಾನಿಕ್ಸ್‌, ಸ್ಟಾರ್ಟ್‌ಅಪ್‌, ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ಆ್ಯಂಡ್ಡಿ) , ಜೈವಿಕ ತಂತ್ರಜ್ಞಾನ ಹಾಗೂ ವೈದ್ಯಕೀಯ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಯೋಗಕ್ಕೆ ವಿಪುಲ ಅವಕಾಶಗಳು ಇವೆʼ ಎಂದು ಸಚಿವರು ಕಿಮ್‌ ಅವರ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿಯೊಂಗಿ ನವೋದ್ಯಮ ಶೃಂಗಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಸ್ಟಾರ್ಟ್‌ಅಪ್‌ಗಳಿಗೆ ಕಿಮ್‌ ಅವರು ಆಹ್ವಾನ ನೀಡಿದರು.

ಭಾರತದ ಸಿಲಿಕಾನ್‌ ಕಣಿವೆ ಖ್ಯಾತಿಯ ಬೆಂಗಳೂರು ಮತ್ತು ಕೊರಿಯಾದ ಸಿಲಿಕಾನ್‌ ಕಣಿವೆ ಖ್ಯಾತಿಯ ಪ್ಯಾಂಗೊ ಟೆಕ್ನೊ ವ್ಯಾಲಿ ನಡುವೆ ವಾಣಿಜ್ಯ ಬಾಂಧವ್ಯ ವೃದ್ಧಿಸಲು ನಿರ್ಧರಿಸಲಾಯಿತು.

ಸೋಲ್‌ ಮೆಟ್ರೊಪಾಲಿಟನ್‌ ಸರ್ಕಾರದ ಆರ್ಥಿಕ ನೀತಿಯ ಉಪ ಮೇಯರ್‌ ಲೀ ಹೆ ವೊ ಅವರ ಜೊತೆಗಿನ ಭೇಟಿಯಲ್ಲಿ ಹಣಕಾಸು, ಹೂಡಿಕೆ, ನವೋದ್ಯಮ, ಸಂಶೋಧನೆ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಕೊರಿಯಾದ ಕಂಪನಿಗಳಿಗೆ ರಾಜ್ಯ ಸರ್ಕಾರ ಒದಗಿಸಲಿರುವ ಸೌಲಭ್ಯಗಳನ್ನು ವಿವರಿಸಲಾಗಿದೆ.

ರಾಜ್ಯದಲ್ಲಿ ತನ್ನ ಹಣಕಾಸು ಚಟುವಟಿಕೆ ವಿಸ್ತರಿಸುವ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ಕೆಇಬಿ ಹನಾಬ್ಯಾಂಕ್‌ ತಿಳಿಸಿದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...