ಸಂತ್ರಸ್ತೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣ ನಾಪತ್ತೆ: ಹುಡುಕಾಟಕ್ಕೆ 4 ವಿಶೇಷ ತಂಡ ರಚಿಸಿದ ಎಸ್‌ಐಟಿ

Date:

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ತಂಡ ಬಲೆ ಬೀಸಿದ್ದು, ಹುಡುಕಾಟಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿರುವುದಾಗಿ ವರದಿಯಾಗಿದೆ.

ಸಂತ್ರಸ್ತೆ ಅಪಹರಣ ನಡೆದ ದಿನದಿಂದಲೂ ಬಹುತೇಕ ಕಣ್ಮರೆಯಾಗಿದ್ದ ಭವಾನಿ, ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬಳಿಕ ಆಪ್ತರಿಗೂ ಸುಳಿವು ನೀಡದೆ ತಲೆಮರೆಸಿಕೊಂಡಿದ್ದಾರೆ. ಭವಾನಿ ರೇವಣ್ಣ ಬಂಧನಕ್ಕಾಗಿಯೇ ಎಸ್‌ಐಟಿ 4 ವಿಶೇಷ ತಂಡಗಳನ್ನು ರಚನೆ ಮಾಡಿದೆ.

ಮತ್ತೊಂದು ಕಡೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ವಶದಲ್ಲಿದ್ದು, ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಚ್. ಡಿ. ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬುದು ಆರೋಪವಾಗಿದೆ. ಈ ದೂರುದಾರ ಮಹಿಳೆಯನ್ನು ಅಪಹರಣ ಮಾಡಲಾಗಿತ್ತು. ಈ ಕುರಿತು ಕೆ.ಆರ್‌. ನಗರ ಠಾಣೆಯಲ್ಲಿ ಮಹಿಳೆಯ ಪುತ್ರ ಅಪಹರಣ ಪ್ರಕರಣ ದಾಖಲಿಸಿದ್ದರು.

ಕಳೆದ ಶನಿವಾರದಂದು ಎಸ್‌ಐಟಿಯು, “ಮಹಿಳಾ ಅಧಿಕಾರಿಗಳ ತಂಡ ತಮ್ಮ ವಿಚಾರಣೆಗೆ ನಿಮ್ಮ ಮನೆಗೆ ಆಗಮಿಸಲಿದೆ. ಹೊಳೆನರಸೀಪುರ ನಿವಾಸದಲ್ಲಿ ನೀವು ಹಾಜರಿರಬೇಕು” ಎಂದು ಭವಾನಿ ರೇವಣ್ಣಗೆ ನೋಟಿಸ್ ನೀಡಿತ್ತು. ಅದರಂತೆ, ಶನಿವಾರ ಬೆಳಗ್ಗೆ ಎಸ್‌ಐಟಿ ಅಧಿಕಾರಿಗಳು ನಿವಾಸಕ್ಕೆ ತೆರಳಿದ್ದರು. ಆದರೆ ಬೆಳಗ್ಗೆಯಿಂದ ಸಂಜೆಯ ತನಕ ಕಾದರೂ ಸಹ ಶನಿವಾರ ಹೊಳೆನರಸೀಪುರ ನಿವಾಸಕ್ಕೆ ಭವಾನಿ ರೇವಣ್ಣ ಬರಲಿಲ್ಲ.

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣ ಅವರ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿಯವರಿಗೆ ಬಂಧನ ಭೀತಿ ಎದುರಾಗಿದೆ. ಈ ಬೆಳವಣಿಗೆಯ ನಡುವೆಯೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಕಾರು ಚಾಲಕನನ್ನು ಎಸ್‌ಐಟಿ ತಂಡ ಶುಕ್ರವಾರ ಸಂಜೆ ಬಂಧಿಸಿತ್ತಾದರೂ, ಭವಾನಿ ರೇವಣ್ಣ ಎಲ್ಲಿದ್ದಾರೆಂಬ ಮಾಹಿತಿ ವಾಹನ ಚಾಲಕನಿಗೂ ಇಲ್ಲ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಚುನಾವಣೋತ್ತರ ಸಮೀಕ್ಷೆ: ಎಕ್ಸಿಟ್‌ ಪೋಲ್‌ಗಳ ಸತ್ಯಾಸತ್ಯತೆ ಎಷ್ಟು? ಈದಿನ.ಕಾಮ್ ಸವಾಲು!

ಈ ಎಲ್ಲ ಬೆಳವಣಿಗೆಯ ನಡುವೆಯೇ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ಅವರು ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...