ಸಂತ್ರಸ್ತೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣ ಕಾರು ಚಾಲಕನನ್ನು ಬಂಧಿಸಿದ ಎಸ್‌ಐಟಿ ತಂಡ

Date:

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣ ಅವರ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿಯವರಿಗೆ ಬಂಧನ ಭೀತಿ ಎದುರಾಗಿದೆ. ಈ ಬೆಳವಣಿಗೆಯ ನಡುವೆಯೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಕಾರು ಚಾಲಕನನ್ನು ಎಸ್‌ಐಟಿ ತಂಡ ಶುಕ್ರವಾರ ಸಂಜೆ ಬಂಧಿಸಿರುವುದಾಗಿ ವರದಿಯಾಗಿದೆ.

ಇಂದು ಸಂಜೆ ಎಸ್ಐಟಿಯವರು ಅಜಿತ್‌ನನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್‌ ಕೊಟ್ಟಿತ್ತು. ಆದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡದ ಪೊಲೀಸರು ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ನೋಟಿಸ್ ಅನ್ನು ಅಂಟಿಸಿ ಕೂಡ ಬಂದಿದ್ದರು.

ಈ ನಡುವೆ ನಾನಾ ಕಡೆಗೆ ತಿರುಗುತ್ತಾ ಪೊಲೀಸರ ಕಣ್ಣು ತಪ್ಪಿಸುತ್ತಿದ್ದ ಅಜಿತ್‌ ಅನ್ನು ಇಂದು ಬಂಧಿಸುವಲ್ಲಿ ಎಸ್‌ಐಟಿ ತಂಡ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಆರೋಪ ಚಾಲಕ ಅಜಿತ್ ಮೇಲಿದೆ. ಅಲ್ಲದೇ, ಎಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆಯ ದಿನ ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿ, ಅದನ್ನು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡಿರುವ ಆರೋಪ ಕಡ ಈತನ ಮೇಲಿದೆ. ಹೀಗಾಗಿಯೇ ಅಜಿತ್‌ನನ್ನು ಎಸ್‍ಐಟಿಯವರು ಹುಡುಕಾಟ ನಡೆಸಿದ್ದರು. ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಿರೀಕ್ಷಣಾ ಜಾಮೀನು ವಜಾ: ನಾಪತ್ತೆಯಾಗಿರುವ ಭವಾನಿ ರೇವಣ್ಣ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣ ಅವರ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿಯವರಿಗೆ ಬಂಧನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಸಂತ್ರಸ್ತೆಯ ಅಪಹರಣ ಪ್ರಕರಣ | ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

ಭವಾನಿ ರೇವಣ್ಣ ಅವರ ತವರು ಮನೆಗೆ ಕೂಡ ಬೀಗ ಜಡಿಯಲಾಗಿದ್ದು, ಈ ಬೃಹತ್ ಬಂಗಲೆ ಇದೀಗ ಖಾಲಿ ಇದೆ ಎಂದು ವರದಿಯಾಗಿದೆ. ಸದ್ಯ ಚಾಲಕನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ, ಭವಾನಿ ರೇವಣ್ಣ ಅವರ ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...