ಕೆ ಎನ್‌ ರಾಜಣ್ಣ ವಜಾ ನನಗೂ ನೋವಾಗಿದೆ, ಇದು ಪಕ್ಷದ ತೀರ್ಮಾನ: ಡಿಸಿಎಂ ಡಿ ಕೆ ಶಿವಕುಮಾರ್

Date:

ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ ನೀಡಿದ್ದಾರೆ. ನನಗೆ ಬೇರೆ ಯಾವುದೇ ವಿಚಾರ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳು ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಲಾಯಿತೇ ಎಂದು ಕೇಳಿದಾಗ,‌ “ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. ಕಳೆದ 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ” ಎಂದರು.

ಪಕ್ಷದಿಂದ ಉಚ್ಚಾಟಿಸಬೇಕು ಎಂದು ಹೈಕಮಾಂಡ್ ನಿಂದ ಸೂಚನೆ ಏನಾದರೂ ಬಂದಿತ್ತೇ ಎಂದು ಕೇಳಿದಾಗ,‌ “ಶಾಸಕರು ಮತ್ತು ಮಂತ್ರಿಗಳು ನನ್ನ ಕಾರ್ಯವ್ಯಾಪ್ತಿಗೆ ಬರುವುದಿಲ್ಲ. ಶಾಸಕರಾದ ನಂತರ ಪಕ್ಷಕ್ಕೆ ಸಂಬಂಧ ಪಟ್ಟಂತೆ ಅಶಿಸ್ತು ತೋರಿದರೆ ಸಣ್ಣಪುಟ್ಟ ನೋಟಿಸ್ ನೀಡುವ ಕೆಲಸ ಮಾಡಲಾಗುತ್ತದೆ.‌ ಇದರ ಹೊರತಾಗಿ ಸಿಎಲ್ ಪಿ ನಾಯಕರೇ ಮಂತ್ರಿಗಳು ಹಾಗೂ ಶಾಸಕರ ಮೇಲೆ ನಿಯಂತ್ರಣ ಹೊಂದಿರುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಯಿತು ಎಂದಾಗ, “ಇದರ ಬಗ್ಗೆ ನನಗೆ ಗೊತ್ತಿಲ್ಲ.‌ ಏನೂ ಮಾಡಲು ಆಗುವುದಿಲ್ಲ. ಇದು ಪಕ್ಷದ ತೀರ್ಮಾನ” ಎಂದರು.

ರಾಜೀನಾಮೆ ತೆಗೆದುಕೊಳ್ಳಬಹುದಿತ್ತು, ಆದರೆ ವಜಾ ಮಾಡಿದ್ದು ಅವಮಾನ ಮಾಡಿದಂತೆ ಅಲ್ಲವೇ ಎಂದಾಗ, “ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಪುನರುಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...