ಪ್ರದೀಪ್‌ ಈಶ್ವರ್‌ ಗೆದ್ದು `ಹುಚ್ಚ ವೆಂಕಟ್’ ರೀತಿ ಆಡುತ್ತಿದ್ದಾರೆ: ಸಂಸದ ಮುನಿಸ್ವಾಮಿ

Date:

  • ರಾಜಕೀಯ ಮೆಚ್ಯುರಿಟಿಗಾಗಿ ನನ್ನತ್ರ ಟ್ಯೂಷನ್ ಬಂದರೆ ಒಳ್ಳೆಯದು
  • ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು

ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ಗೆ ಕೋಲಾರ ಸಂಸದ ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಪ್ರದೀಪ್‌ ಈಶ್ವರ್‌ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್‌ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಮುನಿಸ್ವಾಮಿ ಕಿಡಿಕಾರಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, “ನಾನು 2002ರಿಂದಲೂ ರಾಜಕೀಯದಲ್ಲಿದ್ದು, ಪ್ರದೀಪ್‌ ಈಶ್ವರ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ರಾಜಕೀಯ ಮೆಚ್ಯುರಿಟಿಗಾಗಿ ನನ್ನ ಬಳಿ ಟ್ಯೂಶನ್‌ಗೆ ಬರಲಿ” ಎಂದು ವಾಗ್ದಾಳಿ ನಡೆಸಿದ್ದಾರೆ.

“ನಾನು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಂಸದ ಚುನಾವಣೆವರೆಗೂ ನಿಭಾಯಿಸಿದ್ದೇನೆ. ಪ್ರದೀಪ್‌ ಈಶ್ವರ್‌ನಂತಹ ರಾಜಕೀಯ ಅನನುಭವಿಯಿಂದ ನನಗೆ ಕಲಿಯೋದು ಏನಿದೆ? ಅವನೊಬ್ಬ ಎರಡನೇ‌ ಹುಚ್ಚ ವೆಂಕಟ್, ಲಬಾ ಲಬಾ ಅಂತ ಬಾಯಿ‌ ಬಡ್ಕೋತಾನೆ. ಮಕ್ಕಳಿಗೆ ಪಾಠ ಮಾಡಿ ಬಾಯಿ‌ ಬಡ್ಕೋಳೋದಲ್ಲ, ನನ್ನತ್ರ ಟ್ಯೂಷನ್‌ಗೆ ಬರಲಿ” ಎಂದು ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನಿಸ್ವಾಮಿ ಅಲ್ಲ ಅವರು ‘ಮನಿ’ಸ್ವಾಮಿ

ಶುಕ್ರವಾರ ಬಿಜೆಪಿ ಸಂಸದ ಮುನಿಸ್ವಾಮಿ ವಿರುದ್ಧ ಕಿಡಿಕಾರಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌, “ಬಿಜೆಪಿ ಸಂಸದ ಮುನಿಸ್ವಾಮಿ ಒಂದು ರೀತಿ ಚೈಲ್ಡ್‌ ಆರ್ಟಿಸ್ಟ್‌ ಇದ್ದಂಗೆ. ಮುನಿಸ್ವಾಮಿ ಅಲ್ಲ ಅವರು ‘ಮನಿ’ಸ್ವಾಮಿ ಎಂದು ವ್ಯಂಗ್ಯವಾಡಿದ್ದರು.

“ನಾನು ಅವರನ್ನು ಮುನಿಸ್ವಾಮಿ ಎಂದುಕೊಂಡಿದ್ದೆ. ‘ಮನಿ’ಸ್ವಾಮಿ ಎಂಬುದು ಈಗ ಗೊತ್ತಾಯಿತು. ಚಿಂತಾಮಣಿ ಮತ್ತು ಕೋಲಾರದ ಪ್ರಭಾವಿ ನಾಯಕರು ಮನಸ್ಸು ಮಾಡಿಲ್ಲದಿದ್ದರೆ ಅವರು ಹೇಗೆ ಸಂಸದರಾಗುತ್ತಿದ್ದರು? ಅವರು ಒಂದು ರೀತಿ ಚೈಲ್ಡ್‌ ಆರ್ಟಿಸ್ಟ್‌ ಇದ್ದಂತೆ. ಒಬ್ಬ ಸಂಸದ ಹೇಗೆ ಇರಬೇಕು ಎನ್ನುವುದು ಗೊತ್ತಿಲ್ಲ. ಮುನಿಸ್ವಾಮಣ್ಣ ನನಗೆ ಇನ್ನು ಐದು ವರ್ಷಕ್ಕೆ ಇರೋದು ಹಬ್ಬ. ನಿಮಗೆ ಮುಂದಿನ ವರ್ಷವೇ ಇದೆ ಹಬ್ಬ. ನೋಡೇ ಬಿಡೋಣ” ಎಂದು ಸವಾಲು ಹಾಕಿದ್ದರು.

ಈ ಸುದ್ದಿ ಓದಿದ್ದೀರಾ? ವಿಧಾನಸೌಧದಲ್ಲೇ ‘ಮೌಢ್ಯ’ಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ

ಪ್ರತಾಪ್‌ ಸಿಂಹ ಚರ್ಚೆಗೆ ಬರಲಿ

“ಮಾನ್ಯ ಪ್ರತಾಪ್‌ ಸಿಂಹ ಅವರೇ, ನೀವು ಪತ್ರಕರ್ತರಾಗಿದ್ದಾಗ ಸ್ವಲ್ಪ ಓದುತ್ತಿದ್ದೀರಿ. ಸಂಸದರಾದ ಮೇಲೆ ಓದೋದು ಬಿಟ್ಟು ಬಿಟ್ಟಿದ್ದೀರಿ. ಫುಡ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ ಒಂದು ಗೋಡೌನ್‌ ಇದ್ದಂಗೆ ಎಂದು ಹೇಳ್ತಿರಲ್ಲ, ನಿಮಗೇನಾದರೂ ತಲೆಗಿಲೆ ಕೆಟ್ಟಿದೆಯಾ? ತಾಕತ್ತಿದ್ದರೆ ಎಫ್‌ಸಿಐ ಬಗ್ಗೆ ಚರ್ಚೆಗೆ ಬನ್ನಿ” ಎಂದು ಪ್ರದೀಪ್‌ ಈಶ್ವರ್‌ ಸಂಸದ ಪ್ರತಾಪ್‌ ಸಿಂಹಗೆ ಸವಾಲು ಹಾಕಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...