ಕೆಪಿಎಸ್‌ಸಿ | ಅನರ್ಹ ವ್ಯಕ್ತಿಗಳು ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲು ಹೇಗೆ ಸಾಧ್ಯ: ಹೈಕೋರ್ಟ್‌ ಪ್ರಶ್ನೆ

Date:

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರ ನೇಮಕಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ಸತ್ಯಶೋಧನಾ ಸಮಿತಿ‌ ರಚನೆಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

“ಅನರ್ಹ ವ್ಯಕ್ತಿಗಳು ಕೆಪಿಎಸ್‌ಸಿ ಸದಸ್ಯರಾಗಿ ನೇಮಕವಾದಲ್ಲಿ ವಿವಿಧ ಜ್ಞಾನದ ಶಾಖೆಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲು ಹೇಗೆ ಸಾಧ್ಯ” ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಕುಡಿಯುವ ನೀರು ಪೂರೈಕೆ ವಿಭಾಗದ ಸಹಾಯಕ ಎಂಜಿನಿಯರ್‌ಗಳ ನೇಮಕದಲ್ಲಿ ಅಕ್ರಮ ನಡೆಸಿ ಆಯ್ಕೆಯಾದ ಕಳಂಕಿತ ಸಹಾಯಕ ಎಂಜಿನಿಯರ್‌ಗಳ ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್‌ಸಿ ಮಾಡಿರುವ ಶಿಫಾರಸ್ಸಿಗೆ ತಡೆ ನೀಡಲು ನಿರಾಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಟಿ) ಕ್ರಮ ಪ್ರಶ್ನಿಸಿ, ಎಂಜಿನಿಯರ್‌ಗಳಾದ ವಿಶ್ವಾಸ್‌ ಮತ್ತಿತರರು ಹೈಕೋರ್ಟ್‌ಗೆ ಎರಡು ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸರ್ಕಾರದ ಕ್ರಮಕ್ಕೆ ಸಿಟ್ಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಗಿಂತಲೂ ಕೆಳಮಟ್ಟದವರ ಮುಂದೆ ಸಂದರ್ಶನಕ್ಕೆ ಹಾಜರಾಗುವಂತೆ ಮಾಡಿದರೆ ಉನ್ನತ ವರ್ಗವು ಯಾವ ರೀತಿಯ ಅಭಿಪ್ರಾಯಕ್ಕೆ ಬರುತ್ತದೆ ಎಂಬುದನ್ನು ಹೆಚ್ಚಾಗಿ ವಿವರಿಸುವ ಅಗತ್ಯವಿಲ್ಲ ಎಂದು ಪೀಠ ಸ್ಪಷ್ಟವಾಗಿ ಹೇಳಿದೆ.

ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ”ಕೆಪಿಎಸ್‌ಸಿ ಸದಸ್ಯರ ಆಯ್ಕೆ ಮತ್ತು ನೇಮಕಾತಿಗೆ ನೆರವು ನೀಡಲು ಶೋಧನಾ ಸಮಿತಿಯ ರಚನೆಗೆ ತುರ್ತು ಆಧಾರದ ಮೇಲೆ ಕೆಲವು ಪ್ರಕ್ರಿಯೆ ರೂಪಿಸಲಾಗುತ್ತಿದೆ. ಆ ಕುರಿತ ಬೆಳವಣಿಗೆಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದ ಮುಂದೆ ಇಡಲಾಗುವುದು” ಎಂದು ಭರವಸೆ ನೀಡಿದರು.

ಇದಕ್ಕೆ ಪೀಠ, ”ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡಿದೆ. ಸದಸ್ಯರ ನೇಮಕಾತಿಗೆ ಅರ್ಹರ ಹೆಸರು ಶಿಫಾರಸು ಮಾಡಲು ಶೋಧನಾ ಸಮಿತಿಯನ್ನು ರಚಿಸಲು ಸರ್ಕಾರ ಆಸಕ್ತಿ ತೋರಿಸುತ್ತಿರುವುದು ಶ್ಲಾಘನೀಯ. ಆದರೆ, ಈ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಮಾಡಬೇಕಿದೆ. ಈ ಭರವಸೆಯನ್ನು ನ್ಯಾಯಾಲಯ ಪ್ರಶಂಸಿಸುತ್ತದೆ” ಎಂದು ಪೀಠ ತಿಳಿಸಿದೆ.

ಕೆಪಿಎಸ್‌ಸಿ ಖ್ಯಾತಿ ಕುಸಿದಿದೆ

ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ವಿಶೇಷವಾಗಿ ಸರ್ಕಾರದ ಸಚಿವಾಲಯ ಮಟ್ಟದಲ್ಲಿ ನಡೆದಿರುವ ಹಲವು ಲೋಪಗಳಿದ್ದು, ಅಮಾಯಕ ಅಭ್ಯರ್ಥಿಗಳು ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಯಾವುದೇ ತಪ್ಪಿತಸ್ಥ ವ್ಯಕ್ತಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಹಾನಿಗೊಳಗಾಗುವುದಿಲ್ಲ ಎಂದ ಬೇಸರ ವ್ಯಕ್ತಪಡಿಸಿದ ಪೀಠ, ಕೆಪಿಎಸ್‌ಸಿ ಅಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಸಾರ್ವಜನಿಕರಿಗೆ ನಂಬಿಕೆ ಕುಸಿದಿದೆ. ಕೆಪಿಎಸ್‌ಸಿಯು ಸಾರ್ವಜನಿಕ ಉದ್ಯೋಗದ ಆಕಾಂಕ್ಷಿಗಳ ವಿಶ್ವಾಸ ಗಳಿಸಬೇಕಿದೆ. ಕಳೆದ ಎರಡು ದಶಕಗಳಲ್ಲಿ ನಡೆದ ನೇಮಕಾತಿಯಲ್ಲಿ ಕೆಪಿಎಸ್‌ಸಿಗೆ ಅಪಖ್ಯಾತಿ ಗಳಿಸಿದೆ. ಅದರ ಘನತೆ ಕೆಳಮಟ್ಟಕ್ಕೆ ಇಳಿದಿದೆ ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...