ಸಭೆ ಸಮಾರಂಭಗಳಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ; ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚನೆ

Date:

ಕಂದಾಯ ಇಲಾಖೆ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ವೆಚ್ಚ ಕಡಿತದ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತು ಟಿಪ್ಪಣೆ ಹೊರಡಿಸಿರುವ ಸಚಿವ ಕೃಷ್ಣಭೈರೇಗೌಡ ಅವರು, “ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಇಲಾಖಾ ವತಿಯಿಂದ ನಾನಾ ಹಂತಗಳಲ್ಲಿ ಸಭೆ ಸಮಾರಂಭಗಳನ್ನು ನಿಯಮಿತವಾಗಿ ಏರ್ಪಡಿಸಲಾಗುತ್ತದೆ. ಕಂದಾಯ ಇಲಾಖೆಯಡಿ ಆಯೋಜಿಸುವ ಸಭೆ ಸಮಾರಂಭಗಳಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು” ಎಂದು ಸೂಚಿಸಿದ್ದಾರೆ.

ಕೃಷ್ಣ ಭೈರೇಗೌಡ 1
  • ಆಡಂಬರ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ, ಸಭೆ ಸಮಾರಂಭಗಳನ್ನು ಸರಳವಾಗಿ ನಡೆಸುವುದು. ಅನಗತ್ಯವಾಗಿ ಹಾರ, ನೆನಪಿನ ಕಾಣಿಕೆ ನೀಡದೇ, ಅವಶ್ಯವಿದ್ದಲ್ಲಿ ತ್ರಿವರ್ಣ ಖಾದಿ ಹತ್ತಿಯ ಹಾರವನ್ನು ಮಾತ್ರ ಬಳಸುವುದು.
  • ಸಭೆ ಸಮಾರಂಭಗಳಲ್ಲಿ ಆತಿಥ್ಯಕ್ಕೆ, ಔಪಚಾರಿಕತೆಗೆ ಸಮಯ ವ್ಯರ್ಥ ಮಾಡದೇ, ಔಪಚಾರಿಕತೆಗೆ ಸಮಯವನ್ನು ಮಿತವಾಗಿರಿಸಿ, ಸಭೆ ಸಮಾರಂಭದ ಮೂಲ ವಿಷಯಕ್ಕೆ ಹೆಚ್ಚಿನ ಸಮಯ ಒದಗಿಸುವುದು.
  • ಕುಡಿಯುವ ನೀರಿಗೆ ಬಳಸಿ ಬಿಸಾಡುವಂತ ಪ್ಲಾಸ್ಟಿಕ್ ಬಾಟಲ್, ಕಪ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಿ, ಮರುಬಳಕೆ ಮಾಡುವ ಬಾಟಲ್‌, ಕಪ್‌ಗಳನ್ನು ಉಪಯೋಗಿಸುವುದು. ನೀರನ್ನು 20 ಲೀ, ಕ್ಯಾನ್ ಮುಖಾಂತರ ಖರೀದಿಸಿ, ಮರುಬಳಕೆ ಮಾಡಲಾಗುವ ಬಾಟಲ್‌ಗಳಲ್ಲಿ ನೀಡುವುದು.

ಈ ಸುದ್ದಿ ಓದಿದ್ದೀರಾ? ಮೈಷುಗರ್‌ ಸಕ್ಕರೆ ಕಾರ್ಖಾನೆಗೆ ವಿದ್ಯುತ್‌ ಪೂರೈಸಲು ಒತ್ತಾಯ: ಇಂಧನ ಸಚಿವರಿಗೆ ದಿನೇಶ್‌ ಗೂಳಿಗೌಡ ಪತ್ರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...