ಮೋದಿ ಫೋಟೊ ಬಳಕೆ ಮಾಡುವ ಅಧಿಕಾರ ಈಶ್ವರಪ್ಪನವರಿಗಿಲ್ಲ: ವಿಪಕ್ಷ ನಾಯಕ ಆರ್ ಅಶೋಕ್

Date:

ಲೋಕಸಭೆ ಚುನಾವಣೆಗೆ  ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದ ವೇಳೆ ನರೇಂದ್ರ ಮೋದದಿಯವರ ಫೋಟೋ ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, “ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುವ ಅಧಿಕಾರ ಈಶ್ವರಪ್ಪನವರಿಗೆ ಇಲ್ಲ” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪನವರಿಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಅವರು ಬಳಕೆ ಮಾಡಿದರೆ ಅದು ತಪ್ಪು. ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಸಿಕೊಳ್ಳಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ‌ ಬಿಜೆಪಿ ಪಕ್ಷಕ್ಕೆ ಮಾತ್ರ ಮೋದಿ ಫೋಟೊ ಬಳಕೆಗೆ ಅಧಿಕಾರ ಇದೆ. ಈಶ್ವರಪ್ಪ ಅನಧಿಕೃತವಾಗಿ ಮೋದಿಯವರ ಫೋಟೋ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸಿದ ಬಳಿಕ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅಶೋಕ್ ಆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದಲ್ಲಿ ಅರ್ಜಿ ಹಾಕಿದ ಈಶ್ವರಪ್ಪ

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ‘ಮೋದಿ ಅವರಪ್ಪನ ಆಸ್ತಿಯಾ’ ಎಂದು ತಿರುಗೇಟು ನೀಡಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...