ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

Date:

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ಸಜ್ಜಾಗಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ವಾಪಾಸ್ ಪಡೆಯುತ್ತಾರೆ ಎಂಬ ವದಂತಿಗಳಿಗೆ ಈಶ್ವರಪ್ಪ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

“ಯಾವುದೇ ಕಾರಣಕ್ಕೂ ನಾನು ನಾಮಪತ್ರವನ್ನು ವಾಪಾಸ್ ಪಡೆಯುವುದಿಲ್ಲ. ರಾಜ್ಯ ಬಿಜೆಪಿಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರೇ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ. ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ” ಎಂದು ಹೇಳಿದ್ದಾರೆ.

“ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಬೆನ್ನಿಗೆ ನಿಂತಿರುವ ಜನರಿಗೆ ನಾನು ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ನಾಮಪತ್ರ ಹಿಂಪಡೆದಿರುವ ಬಗ್ಗೆ ಬಂದಿರುವ ವರದಿಗಳು ನಿಜವಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಈಗಾಗಲೇ, ಶಿವಮೊಗ್ಗ ಜನರಿಂದ ನನಗೆ ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ

“ಮಾತುಕತೆಯ ಎಲ್ಲ ಕತೆ ಮುಗಿದಿದೆ. ಈಗ ನೇರ ಸ್ಪರ್ಧೆ ನಡೆಯಲಿದೆ. ಎಲ್ಲ ಮುಖಂಡರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಶಿವಮೊಗ್ಗದ ಜನರೂ ನನ್ನ ಜೊತೆಗಿದ್ದಾರೆ. ನಾನು ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...