ಕೆಎಸ್‌ಡಿಎ ಲಂಚ ಪ್ರಕರಣ | ಲೋಕಾಯುಕ್ತ ಕಸ್ಟಡಿಗೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

Date:

  • ಏಪ್ರಿಲ್‌ 1ರವರೆಗೆ ಲೋಕಾಯುಕ್ತ ವಶಕ್ಕೆ ನೀಡಿ ಆದೇಶ
  • ನ್ಯಾಯಮೂರ್ತಿ ಬಿ ಜಯಂತ್ ಕುಮಾರ್ ಅವರಿದ್ದ ಪೀಠ

ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಂಧನವಾಗಿರುವ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪನವರನ್ನು 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಸಂಸ್ಥೆಗೆ ಕೆಮಿಕಲ್‌ ಆಯಿಲ್‌ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡುವುದಕ್ಕೆ ಲಕ್ಷಾಂತರ ರೂಪಾಯಿ ಹಣ ಪಡೆಯುವಾಗ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು.

ಇದೇ ವೇಳೆ ಮಾಡಾಳ್‌ ಮನೆಗೆ ದಾಳಿ ಮಾಡಿದ ಲೋಕಾಯುಕ್ತರು ಕೋಟ್ಯಾಂತರ ರೂಪಾಯಿ ದಾಖಲೆಯಿಲ್ಲದ ಹಣ ವಶಪಡಿಸಿಕೊಂಡಿದ್ದರು. ಶಾಸಕ, ಶಾಸಕರ ಪುತ್ರ ಸೇರಿದಂತೆ 6 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಬಂಧನದ ಭೀತಿಯಿಂದ ಶಾಸಕ ಮಾಡಾಳ್‌ ನಾಪತ್ತೆಯಾಗಿ ಅಜ್ಞಾತ ಸ್ಥಳದಲ್ಲಿದ್ದುಕೊಂಡು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಈ ಸುದ್ದಿ ಓದಿದ್ದೀರಾ? : ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್‌ ಅವರ ನ್ಯಾಯಪೀಠವು ಕೆಲವು ಷರತ್ತುಗಳೊಂದಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಆದರೆ, ನಿನ್ನೆ (ಸೋಮವಾರ) ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ರದ್ದು ಮಾಡಿ, ಆದೇಶ ಹೊರಡಿಸಿತ್ತು.

ಈ ಬೆನ್ನಲ್ಲೇ, ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಬಂಧಿಸಿದ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಾಡಾಳ್‌ ಅವರನ್ನು ಏಪ್ರಿಲ್ 1ರವರೆಗೆ ಲೋಕಾಯುಕ್ತ ವಶಕ್ಕೆ ನೀಡಿ ನ್ಯಾಯಮೂರ್ತಿ ಬಿ ಜಯಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...