ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೂತನ ‘ಅಶ್ವಮೇಧ’ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆಗೊಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸ ‘ಅಶ್ವಮೇಧ’ ಕ್ಲಾಸಿಕ್ ಪ್ರಯಾಣದ ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳನ್ನು ಪರಿಚಯಿಸಲಾಗಿದ್ದು, ಪ್ರಯಾಣಿಕರಿಗೆ ಬಹಳ ಅನುಕೂಲವಾಗಲಿದೆ.
ಮುಖ್ಯಮಂತ್ರಿ @siddaramaiah ಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳ ( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು. pic.twitter.com/HLC9PbRhrw
— CM of Karnataka (@CMofKarnataka) February 5, 2024
“ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುಖಕರ ಪ್ರಯಾಣದ ಅನುಭವ ಒದಗಿಸುವುದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಶ್ವಮೇಧ ನಮ್ಮ ಇನ್ನೊಂದು ವಿನೂತನ ಪ್ರಯತ್ನವಾಗಿದೆ” ಎಂದು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಹೇಳಿಕೊಂಡಿದೆ.





