ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ₹1,400 ಕೋಟಿ ಪಾವತಿಸಿಲ್ಲ: ಸಚಿವ ಈಶ್ವರ ಖಂಡ್ರೆ

Date:

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿರುವಂತೆ ದೇವದಾರಿ ಗಣಿಗಾರಿಕೆಗಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ 500 ಕೋಟಿ ರೂ. ಪಾವತಿಸಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಿಂದೆ ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸಿದ ಕೆ.ಐ.ಓ.ಸಿ.ಎಲ್. ಪರಿಸರಕ್ಕೆ ಮಾಡಿರುವ ಹಾನಿಯ ಮೊತ್ತ ಸೇರಿದಂತೆ ಇಲಾಖೆಗೆ ಸುಮಾರು 1400 ಕೋಟಿ ರೂಪಾಯಿ ಬಾಕಿ ಪಾವತಿಸಬೇಕು” ಎಂದು ಹೇಳಿದರು.

“ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿದ್ದಕ್ಕಾಗಿ 119.12 ಕೋಟಿ, ಗಣಿಗಾರಿಕೆಗಾಗಿ ಹೊಸ ಭೂಮಿ ಅಗೆದಿದ್ದಕ್ಕಾಗಿ 19.88 ಕೋಟಿ ರೂ. ಸೇರಿದಂತೆ 142.96 ಕೋಟಿ ರೂ.ಗಳನ್ನು ಪರೋಕ್ಷ ಮತ್ತು ಪ್ರತ್ಯಕ್ಷ ಪರಿಸರ ಹಾನಿಗಾಗಿ ಕಂಪನಿ ಪಾವತಿಸಬೇಕು. ಇದಲ್ಲದೆ ಮಹಾ ಲೆಕ್ಕಪರಿಶೋಧಕರು ಉಲ್ಲೇಖಿಸಿರುವಂತೆ ನಿವ್ವಳ ಪ್ರಸ್ತುವ ಮೌಲ್ಯ (ಎನ್.ಪಿ.ವಿ.) ಮೊತ್ತ, ಬಡ್ಡಿ ಸೇರಿ 1349 ಕೋಟಿ ರೂ. ಪಾವತಿಸಬೇಕು” ಎಂದು ಈಶ್ವರ ಖಂಡ್ರೆ ವಿವರ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದರ ಜೊತೆಗೆ ಕೆ.ಐ.ಓ.ಸಿ.ಎಲ್. ತನ್ನ ಸ್ವಂತ ಭೂಮಿ 114.30 ಹೆಕ್ಟೇರ್, ಸರ್ಕಾರದ ಕಂದಾಯ ಭೂಮಿ 1220.03 ಹೆಕ್ಟೇರ್ ಸೇರಿ ಒಟ್ಟು 1334.33 ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು. ಈ ಪೈಕಿ 670 ಹೆಕ್ಟೇರ್ ಪ್ರದೇಶವನ್ನು ಅಂಕೋಲ- ಹುಬ್ಬಳ್ಳಿ ರೈಲು ಮಾರ್ಗಕ್ಕೆ ಗುರುತಿಸಲಾಗಿದೆ” ಎಂದು ತಿಳಿಸಿದರು.

“ಕುದುರೇಮುಖ ಕಬ್ಬಿಣದ ಅದಿರು ಕಂಪನಿ ಈ ಹಿಂದೆ ಕುದುರೇಮುಖ ಅರಣ್ಯ ಪ್ರದೇಶದಲ್ಲಿ ನಡೆಸಿದ ಗಣಿಗಾರಿಕೆಯ ವೇಳೆ ಪರಿಸರಕ್ಕೆ ಉಂಟು ಮಾಡಿರುವ ಹಾನಿ ವಿಪರೀತವಾಗಿದೆ. ಈ ಬಗ್ಗೆ ನ್ಯಾಯಾಲಯದ ತೀರ್ಪುಗಳಲ್ಲಿ, ಕೇಂದ್ರ ಉನ್ನತಾಧಿಕಾರ ಸಮಿತಿ (ಸಿ.ಇ.ಸಿ.) ವರದಿಯಲ್ಲಿ ಹಾಗೂ 13ನೇ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನೀಡಿರುವ 3ನೇ ವರದಿಯಲ್ಲೂ ವಿವರವಾಗಿ ತಿಳಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...