ಗಾಂಧಿ ಬಿಟ್ಟರೆ ಕುಮಾರಸ್ವಾಮಿಯೇ ಸತ್ಯವಂತ: ಸಚಿವ ಚಲುವರಾಯಸ್ವಾಮಿ

Date:

ಸಚಿವ ಎನ್ ಚಲುವರಾಯಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇದೀಗ, ಕುಮಾರಸ್ವಾಮಿ ಅವರ ಹೆಸರು ಹೇಳದೆ, ಅವರ ವಿರುದ್ಧ ವ್ಯಂಗ್ಯವಾಡಿರುವ ಸಿಚವ ಚಲುವರಾಯಸ್ವಾಮಿ, ‘ದೇಶದಲ್ಲಿ ಮಹಾತ್ಮ ಗಾಂಧಿ ಬಿಟ್ಟರೆ, ಅರವೇ (ಕುಮಾರಸ್ವಾಮಿ) ಸತ್ಯವಂತ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಎಚ್‌.ಡಿ ಕುಮಾರಸ್ವಾಮಿ ಅವರ ಟೀಕೆಯ ಬಗ್ಗೆ ಪತ್ರಕರ್ತರ ಪತ್ರಕರ್ತರ ಪ್ರಶ್ನೆಗೆ ಉತ್ತಿರಿಸಿದ ಸಚಿವ, “ಅವರು ಭಾರೀ ಸತ್ಯವಂತರು. ನಮ್ಮ ದೇಶದಲ್ಲಿ ಮಹಾತ್ಮಾ ಗಾಂಧಿಯವರ ನಂತರ ಯಾರಾದರೂ ಸತ್ಯವಂತರಿದ್ದರೆ, ಅದು ಅವರು ಮಾತ್ರ” ಎಂದು ಹೇಳಿದ್ದಾರೆ.

“ಅವರು ಹಿಂದೆ ಆರೆಸ್ಸೆಸ್ ಮತ್ತು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೋ, ಈಗಲೂ ಅದನ್ನೇ ಮಾತಾಡುತ್ತಿದ್ದಾರೆ. ಅವರಿಗೆ ಯಾರ ಮಾರ್ಗದರ್ಶನವೂ ಬೇಕಿಲ್ಲ, ಅವರೊಬ್ಬರೇ ಎಲ್ಲ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...