ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

Date:

“ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ’ಗೆ  ತಿರುಗೇಟು ನೀಡಿದರು.

“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಎಲ್‌ಸಿ ಚುನಾವಣೆ ಬಗ್ಗೆ ಕೇಳಿದಾಗ, “ಮೊದಲು ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆ ಮುಗಿಯಲಿ. ನಂತರ ಇದರ ಬಗ್ಗೆ ಕೆಲಸ ಪ್ರಾರಂಭ ಮಾಡುತ್ತೇವೆ” ಎಂದರು.

ಇದನ್ನು ಓದಿದ್ದೀರಾ? ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಯುವಕ- ಯುವತಿಯರಿಗೆ ಶಿವಕುಮಾರ್ ಅವರು ಅಭಿನಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...