ಸೀಟು ಹಂಚಿಕೆ ಕಸರತ್ತು | ಅಮಿತ್ ಶಾ, ಜೆಪಿ ನಡ್ಡಾ ಭೇಟಿಯಾದ ಕುಮಾರಸ್ವಾಮಿ

Date:

ಜೆಡಿಎಸ್ ನಾಯಕ ಹೆಚ್‌ ಡಿ ಕುಮಾರಸ್ವಾಮಿ ಬುಧವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಮೈತ್ರಿ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ, ಸೀಟು ಹಂಚಿಕೆ ಸೇರಿದಂತೆ ಇನ್ನಿತರೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, “ಮುಖ್ಯವಾಗಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಬಿಜೆಪಿ ವರಿಷ್ಠ ನಾಯಕರ ಜತೆ ಚರ್ಚೆ ನಡೆಸಲಾಯಿತು. ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಲಾಯಿತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರು ಜತೆಯಲ್ಲಿ ಇದ್ದರು.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಂತರ ಸೀಟು ಹಂಚಿಕೆ ಚರ್ಚೆ ನಡೆಯಲಿದೆ ಎಂದು ಸಭೆಯ ನಂತರ ಕುಮಾರಸ್ವಾಮಿ ಸುದ್ದಿಗಾರರಿಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜ.19ರಂದು ಕರ್ನಾಟಕಕ್ಕೆ ಮೋದಿ ಭೇಟಿ; ‘ನಿದ್ದೆಯಿಂದ ಎದ್ದೇಳಿ ಮೋದಿ’ ಪೋಸ್ಟರ್‌ಗಳು ವೈರಲ್

ಆರು ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಬಿಜೆಪಿ ನಾಯಕರ ಜತೆಗಿನ ಚರ್ಚೆ ವೇಳೆ ಜೆಡಿಎಸ್​ಗೆ ಕನಿಷ್ಠ ನಾಲ್ಕು ಸ್ಥಾನಗಳ ಖಾತರಿ ದೊರೆತಿದೆ ಎನ್ನಲಾಗಿದೆ. ಆದರೆ, ಇನ್ನೆರಡು ಸ್ಥಾನಗಳಿಗೆ ಚೌಕಾಸಿ ಮಾಡುವತ್ತ ಜೆಡಿಎಸ್ ಕಣ್ಣಿಟ್ಟಿದೆ. ಮಂಡ್ಯ, ಹಾಸನ, ತುಮಕೂರು, ಕೋಲಾರದಲ್ಲಿ ಕಣಕ್ಕಿಳಿಯಲು ಜೆಡಿಎಸ್‌ ಯೋಚಿಸಿದೆ. ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಕೂಡ ಪಕ್ಷದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಜೆಡಿಎಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...