ಕುಮಾರಸ್ವಾಮಿ ಆರೋಪ ಮಾಡೋದು ಬಿಟ್ಟು ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್

Date:

ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಪರವಾಗಿ ಡಿ.ಕೆ ಸುರೇಶ್ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ, ಚನ್ನಪಟ್ಟಣದ ತಿಟ್ಟಮಾರನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಸುರೇಶ್, “ಕುಮಾರಸ್ವಾಮಿ ಅವರು ಆರೋಪ ಮಾಡುವುದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ. ದಿನ ನಿತ್ಯ ಕಾಂಗ್ರೆಸ್ ವಿರುದ್ಧ ದೂಷಣೆ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಬಸ್‌ಗಳನ್ನು ಸೀಜ್ ಮಾಡಿ ಎಸ್‌ಸಿಆರ್ ಹಾಕಿಸಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪವನ್ನು ಟೀಕಿಸಿದ ಸುರೇಶ್‌, “ಅವರು ಬಸ್‌ಗಳಲ್ಲಿ ಜನರನ್ನು ಕರೆ ತಂದಿದ್ದರೆ, ಅದಕ್ಕೆ ಲೆಕ್ಕ ಕೊಡಬೇಕು. ಅದಕ್ಕಾಗಿ ಅನುಮತಿ ಪಡೆಯಬೇಕು ಎಂಬ ಸಾಮಾನ್ಯ ಜ್ಞಾನ ಇಲ್ಲವಾದರೆ, ಅವರು ಹೇಗೆ ಕೇಂದ್ರ ಸಚಿವರಾಗಿದ್ದಾರೆ. ಸಂವಿಧಾನದ ಬಗ್ಗೆ ಮೊದಲು ತಿಳಿದುಕೊಳ್ಳಲಿ. ಬಸ್‌ಗಳಿಗೂ ನಮಗೂ ಏನು ಸಂಬಂಧ?” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಅವರು ಅನೇಕ ಚುನಾವಣೆಗಳನ್ನು ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಬಗ್ಗೆ ಅವರಿಗೂ ಜ್ಞಾನವಿದೆ. ನೀತಿ ಸಂಹಿತೆ ಸಮಯದಲ್ಲಿ ಯಾರು ಯಾವ ಪಾತ್ರ ವಹಿಸುತ್ತಾರೆ, ಪ್ರಕ್ರಿಯೆ ಹೇಗಿರುತ್ತದೆ ಎಂದು ಎಲ್ಲರಿಗೂ ಗೊತ್ತಿದೆ. ನೀತಿ ಸಂಹಿತೆ ಉಲ್ಲಂಘನೆ ಆಗಿದ್ದರೆ ಅದು ಚುನಾವಣಾ ಅಧಿಕಾರಿಗಳಿಗೆ ಸಂಬಂಧಪಟ್ಟ ವಿಚಾರ. ಅದು ನಮಗೆ ಸಂಬಂಧಿಸುವುದಿಲ್ಲ” ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ.

“ಯೋಗೇಶ್ವರ್ 9 ಬಾರಿ ಚುನಾವಣೆ ಎದುರಿಸಿ ಐದು ಬಾರಿ ಶಾಸಕರಾಗಿದ್ದಾರೆ. ತಮ್ಮ ಮಗನನ್ನು ಚುನಾವಣೆಯಲ್ಲಿ ನಿಲ್ಲಿಸಲು ತಂತ್ರಗಾರಿಕೆ ಮಾಡಿ ಯೋಗೇಶ್ವರ್ ಪಕ್ಷ ತೊರೆಯುವಂತೆ ಕುಮಾರಸ್ವಾಮಿ ಮಾಡಿದ್ದಾರೆ. ಅವರೇ ಆಚೆ ಹಾಕಿ ಈಗ ಕಾಂಗ್ರೆಸ್ ಮೇಲೆ ದೂಷಣೆ ಮಾಡುತ್ತಿದ್ದಾರೆ” ಎಂದರು.

“ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಪಕ್ಷದಿಂದ ಯಾರೇ ಅಭ್ಯರ್ಥಿ ಮಾಡಿದರೂ ನಾನೇ ಅಭ್ಯರ್ಥಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈಗಲೂ ನಾವು ಅದನ್ನೇ ಹೇಳುತ್ತಿದ್ದೇವೆ. ಇಲ್ಲಿ ಯೋಗೇಶ್ವರ್ ಅಭ್ಯರ್ಥಿಯಲ್ಲ ಡಿ.ಕೆ ಶಿವಕುಮಾರ್ ಅಭ್ಯರ್ಥಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...