ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು: ಹೆಚ್ ಡಿ ದೇವೇಗೌಡ

Date:

ಮಂಡ್ಯದ ಕೆರಗೋಡು ಹನುಮಧ್ವಜ ವಿವಾದಕ್ಕೆ ಸಂಬಂಧಿಸಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ, ಜೆಡಿಎಸ್​ ಜಂಟಿಯಾಗಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದವು. ಅಂದು ನಡೆದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರೊಂದಿಗೆ ಭಾಗಿಯಾಗಿದ್ದರು. ಕೇಸರಿ ಶಾಲು ಧರಿಸಿ ಹೆಚ್​​ಡಿಕೆ ಭಾಷಣ ಮಾಡಿದ್ದರು. ಈ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿಕೆ ನೀಡಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, “ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು” ಎಂದು ಹೇಳಿದ್ದಾರೆ.

“ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ಕೇಸರಿ ಶಾಲು ಬದಲು ನಮ್ಮ ಪಕ್ಷದ ಶಾಲು ಧರಿಸಬಹುದಿತ್ತು. ಕೇಸರಿ ಶಾಲು ಹಾಕಿದ್ದನ್ನೇ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ” ಎಂದು ಇದೇ ವೇಳೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ Kumaraswamy

“ನಾವು ಇಬ್ಬರು ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ. ಬಿಜೆಪಿ ಜೊತೆ ಹೋಗುವಾಗ ನಮ್ಮ ಶಾಲು ಹಾಕಿಕೊಂಡು ಹೋಗಬೇಕು. ನಾನಂತೂ ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ” ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ಡಿಕೆ ಸುರೇಶ್ ಹೇಳಿರುವುದು ವ್ಯಕ್ತಿಗತವಾಗಿಬಹುದು

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರದ ಬಗ್ಗೆ ಮಾತನಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ದೇವೇಗೌಡ, “ಅವರು ವ್ಯಕ್ತಿಗತವಾಗಿ ಹೇಳಿರಬಹುದು. ಅದು ಅವರ ಪಕ್ಷದ ನಿರ್ಣಯ ಅಲ್ಲ” ಎಂದಿದ್ದಾರೆ.

“ಯಾವ ಉದ್ದೇಶದಲ್ಲಿ ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ಈ ವಿಷಯದಲ್ಲಿ ಮಾತನಾಡುವುದು ನಂಗೆ ಇಷ್ಟ ಇಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಪಕ್ಷ ಕಾಂಗ್ರೆಸ್​​. ದೇಶದಲ್ಲಿ ಸರ್ಕಾರ ಕೂಡ ನಡೆಸಿದೆ. ಅನ್ಯಾಯವಾಗಿದ್ದರೆ, ಬಜೆಟ್ ಚರ್ಚೆ ವೇಳೆ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡ, “ಸೀಟು ಹಂಚಿಕೆಯ ಬಗ್ಗೆ ಕುಮಾರಸ್ವಾಮಿ ಜೊತೆಗೆ ಮಾತುಕತೆ ನಡೆಯುತ್ತಿದೆ. ಮುಂದಿನ ವಾರದೊಳಗೆ ಈ ಬಗ್ಗೆ ತೀರ್ಮಾನ ಹೊರಬೀಳಬಹುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...