ಕುಮಾರಸ್ವಾಮಿ ಅಣ್ಣನ ಮಗ ಅತ್ಯಾಚಾರ ಮಾಡಿ ಓಡಿ ಹೋದವ, ಸತ್ತು ಹೋಗಿರುವ ನನ್ನ ಮಗನಿಗೆ ಏನು ಸಂಬಂಧ: ಎಚ್‌ಡಿಕೆಗೆ ಸಿಎಂ ತಿರುಗೇಟು

Date:

“ನನ್ನ ಮಗ ರಾಕೇಶ್ ಸತ್ತು 8 ವರ್ಷಗಳಾಗಿವೆ. ಈಗ ಆ ವಿಚಾರವನ್ನು ಬೇರ‍್ಯಾವುದಕ್ಕೋ ಜೋಡಿಸಿ ಮಾತನಾಡುವುದು ಮೂರ್ಖತನ. ಕುಮಾರಸ್ವಾಮಿ ಅಣ್ಣನ ಮಗ ಅತ್ಯಾಚಾರ ಮಾಡಿ ಓಡಿ ಹೋಗಿದ್ದಾನೆ. ಅದಕ್ಕೂ 2016ರಲ್ಲಿ ಸತ್ತು ಹೋದ ನನ್ನ ಮಗನ ವಿಚಾರಕ್ಕೂ ಏನು ಸಂಬಂಧ” ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶದಿಂದ ಪ್ರಶ್ನಿಸಿದರು.

ರಾಕೇಶ್ ಸಿದ್ದರಾಮಯ್ಯ ಸಾವಿನ ವಿಚಾರ ಪ್ರಸ್ತಾಪಿಸಿ ಹೇಳಿಕೆ ನೀಡಿರುವ ಕುಮಾರಸ್ವಾಮಿಗೆ ಮೈಸೂರಿನಲ್ಲಿ ತಿರುಗೇಟು ನೀಡಿದ ಸಿದ್ದರಾಮಯ್ಯ, “ಅತ್ಯಾಚಾರಕ್ಕಿಂತ ಅದರ ವಿಡಿಯೊ ಹಂಚಿದ್ದು ದೊಡ್ಡ ಅಪರಾಧ ಎಂದು ಯಾವ ಕಾನೂನಿನಲ್ಲಿದೆ? ಕುಮಾರಸ್ವಾಮಿ ಯಾವ ಸೆಕ್ಷನ್ ಅಡಿ ಹೇಳಿಕೆ ನೀಡಿದ್ದಾರೆ? ಅದು ಭಾರತೀಯ ದಂಡ ಸಂಹಿತೆಯಲ್ಲಿ ಇದೆಯಾ ಅಥವಾ ಅವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ” ಎಂದು ಕುಟುಕಿದರು.

“ವಿಡಿಯೊ ಹಂಚಿದ್ದನ್ನು ನಾನು ಸಮರ್ಥಿಸಿಕೊಳ್ಳುತ್ತಿಲ್ಲ. ಆದರೆ, ವಿಡಿಯೊ ಹಂಚಿದ್ದು ಅತ್ಯಾಚಾರಕ್ಕಿಂತಲೂ ಮಹಾ ಅಪರಾಧ ಎಂದು ಹೇಳುವುದು ಸರಿಯಲ್ಲ. ಆ ರೀತಿ ಮಾತನಾಡುವುದು ದಿಕ್ಕು ತಪ್ಪಿಸುವ ನಡವಳಿಕೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು’ ಎಂಬ ಬಿಜೆಪಿಯವರ ಸಮರ್ಥನೆಗೆ ಪ್ರತಿಕ್ರಿಯಿಸಿ, “ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಅದಕ್ಕೆ ಪ್ರತಿಕ್ರಿಯೆಯೇ ಬಂದಿಲ್ಲ. ನಾನು ಪತ್ರ ಬರೆದದ್ದು ತಡವೇ ಆಗಿದೆ ಎಂದುಕೊಳ್ಳೋಣ, ಬರೆದ ಮೇಲಾದರೂ ಕ್ರಮ ಕೈಗೊಂಡಿಲ್ಲವೇಕೆ? ಸುಮ್ಮನೆ ಕಾಲಹರಣ ಮಾಡುವುದನ್ನು ಬಿಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ನಿಮ್ಮ ಮಗ ಸಾಯಲಿ ಅಂತಲೇ ವಿದೇಶಕ್ಕೆ ಕಳುಹಿಸಿದ್ರಾ : ಸಿಎಂ ಪ್ರಶ್ನಿಸಿದ ಕುಮಾರಸ್ವಾಮಿ

ದಾವಣಗೆರೆ : ಅಧಿಕಾರಿಗಳ ಅಮಾನತಿಗೆ ಸೂಚನೆ

“ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಯುವಕನ ಸಾವು ಲಾಕಪ್ ಡೆತ್ ಅಲ್ಲ. ಮೃತ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದ ಆತ ಮೃತ ಪಟ್ಟಿದ್ದಾನೆ. ಆದರೆ, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಪ್ರಕರಣದ ಬಗ್ಗೆ ತನಿಖೆ ಮಾಡುತ್ತೇವೆ. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸೂಚಿಸಿದ್ದೇನೆ” ಎಂದು ಇದೇ ವೇಳೆ ಹೇಳಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಆದಿಲ್ (30) ಎಂಬ ವ್ಯಕ್ತಿಯನ್ನು ಒಸಿ (ಮಟ್ಕಾ) ಆಡಿಸುತ್ತಿದ್ದ ಆರೋಪದಲ್ಲಿ ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ ಆರೋಪಿ​​ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಇದರಿಂದ ಆಕ್ರೋಶಗೊಂಡ ಮೃತ ಕುಟುಂಬಸ್ಥರು ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...