ಬಿಜೆಪಿ ಜೆಡಿಎಸ್‌ ಮೈತ್ರಿ | ಕುಮಾರಸ್ವಾಮಿ ನಡೆಯಿಂದ ನೋವಾಗಿದೆ: ಸಿಎಂ ಇಬ್ರಾಹಿಂ

Date:

  • ಅಕ್ಟೋಬರ್ 16 ರಂದು ಚಿಂತನ ಮಂಥನ ಸಭೆ
  • ದೇವೇಗೌಡರನ್ನು ನಂಬಿ ಜೆಡಿಎಸ್‌ಗೆ ಬಂದಿರುವೆ

ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿಯ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಮುಂದಿನ ನಡೆ ಏನು ಎಂದು ಎಲ್ಲೆಡೆ ಪ್ರಶ್ನೆಗಳು ವ್ಯಕ್ತವಾಗಿದ್ದು, ಈ ವಿಚಾರವಾಗಿ ಸ್ವತಃ ಇಬ್ರಾಹಿಂ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಅಕ್ಟೋಬರ್ 16 ರಂದು ಚಿಂತನ ಮಂಥನ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳುವೆ” ಎಂದು ತಿಳಿಸಿದರು.

“ನಾನು ಏನೇ ನಿರ್ಧಾರ ಕೈಗೊಂಡರು ಕುಮಾರಸ್ವಾಮಿ ಮತ್ತು ದೇವೇಗೌಡರ ಗಮನಕ್ಕೆ ತಂದೆ ನಿರ್ಧಾರ ತೆಗೆದುಕೊಳ್ಳುವೆ. ಮುಸ್ಲಿಂ ನಾಯಕರಾರು ಇನ್ನೂ ಪಕ್ಷ ತೊರೆದಿಲ್ಲ. ಬೇಸರದಿಂದ ಪಕ್ಷ ತೊರೆಯುವ ಮಾತುಗಳನ್ನಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ನವರು ತಮ್ಮನ್ನು ಸಂಪರ್ಕಿಸಿದ್ದಾರೆಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಯಾರೂ ಈವರೆಗೂ ಸಂಪರ್ಕ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಯಾವುದೇ ವಿಚಾರ ನನ್ನ ಜೊತೆ ಮಾತನಾಡಿಲ್ಲ. ದೆಹಲಿಯ ಕಾಂಗ್ರೆಸ್‌ ನಾಯಕರು ಮಾತನಾಡಿದ್ದಾರೆ. ನಾಯಕರ ಅಭಿಪ್ರಾಯ ತೆಗೆದುಕೊಂಡು ತಿಳಿಸುವೆ ಎಂದಿದ್ದೇನೆ” ಎಂದರು.

“ಶರದ್ ಪವಾರ್‌ ಮಾತನಾಡಿದ್ದಾರೆ. ಆಪ್‌ ಕಡೆಯಿಂದಲೂ ಕರೆ ಬಂದಿದೆ. ತಂದೆಯ ಸಮಾನರಾದ ದೇವೇಗೌಡರು ಇದ್ದಾರೆ. ಅವರ ಅಭಿಪ್ರಾಯ ಮುಖ್ಯ. ನಾನು ಜನತಾದಳ ಸೇರಲು ಅವರೇ ಕಾರಣ. ಎಂಎಲ್‌ಸಿ ಬಿಟ್ಟು ಹೋದೆ. ಕಾರಣ ಕುವೆಂಪು ಅವರ ಸಿದ್ಧಾಂತವನ್ನು ದೇವೇಗೌಡರು ಎತ್ತಿಹಿಡಿದಿದ್ದಾರೆ. ಜೆಡಿಎಸ್‌ ಸೇರಿ ನಾನು ತಪ್ಪು ಮಾಡಿದೆ ಎನ್ನುವ ಅಭಿಪ್ರಾಯ ನನ್ನಲ್ಲಿ ಮೂಡಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಆರ್‌ಟಿಐ ಕಾರ್ಯಕರ್ತರ ಮಾಹಿತಿ ಸಂಗ್ರಹಕ್ಕೆ ಮುಂದಾಯಿತೆ ಸರ್ಕಾರ?

”ಮೈತ್ರಿ ಬಗ್ಗೆ ಈಗಾಗಲೇ ಮಾತುಕತೆ ಮಾಡಿಕೊಂಡು ಬಂದಿದ್ದಾರೆ. ಇದು ಸರಿಯಾ? ನಿತೀಶ್‌ ಕುಮಾರ್‌ ಜೊತೆ ಹೋಗಬೇಕೋ? ಶರದ್ ಪವಾರ್‌ ಜೊತೆ ಹೋಗಬೇಕೋ ಅಥವಾ ಆಪ್‌ ಜೊತೆ ಹೋಗಬೇಕೋ ಇಲ್ಲವೇ ಕಾಂಗ್ರೆಸ್‌ ಜೊತೆ ಹೋಗಬೇಕೋ ಅಥವಾ ಎಲ್ಲ ಬಿಟ್ಟು ಈ ಪಾರ್ಟಿ ಇಟ್ಟುಕೊಂಡು ಇದನ್ನೇ ಕಟ್ಟಬೇಕೋ? ಅಥವಾ ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಮನವೊಲಿಸಬೇಕೋ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಸಬೆಯಲ್ಲಿ ಚರ್ಚಿಸಲಾಗುವುದು” ಎಂದರು.

“ನಮಗೆ ಮೈತ್ರಿ ಬೇಕಿಲ್ಲ. ಬೇಕಾದರೆ ಅವರೇ ನಮ್ಮ ಬಳಿ ಬಂದು ಚರ್ಚಿಸುತ್ತಾರೆ. ಈವರೆಗೂ ಮೈತ್ರಿ ವಿಚಾರವಾಗಿ ದೇವೇಗೌಡರು ಯಾರನ್ನೂ ಭೇಟಿಯಾಗಿಲ್ಲ. ಕುಮಾರಸ್ವಾಮಿ ಅವರು ಹೋಗಿ ಭೇಟಿಯಾಗಿದ್ದಾರೆ. ಅದೇ ನಮಗೆಲ್ಲ ನೋವಾಗಿರುವುದು. ಪಕ್ಷದ ರಾಜ್ಯಾಧ್ಯಕ್ಷ ನಾನು. ನನಗೆ ಒಂದು ಹೇಳಲಿಲ್ಲ. ಹೇಳಿದ್ದರೆ ನಾನು ಸಲಹೆ ಕೊಟ್ಟು ಕಳುಹಿಸುತ್ತಿದ್ದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...