ಕುಂಭಮೇಳ | ಭಕ್ತರ ಆತಂಕ ತಪ್ಪಿಸಲು ಕಾಲ್ತುಳಿತದ ವಾಸ್ತವ ತಿಳಿಸಿಲ್ಲ: ಸಿಎಂ ಆದಿತ್ಯನಾಥ್ ಸಮಜಾಯಿಷಿ

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಜನವರಿ 29ರಂದು ಕಾಲ್ತುಳಿತ ಸಂಭವಿಸಿತ್ತು. ಆ ಘಟನೆಯ ವಾಸ್ತವವನ್ನು ತಿಳಿಸದಿರುವುದರ ಹಿಂದೆ ಭಕ್ತರ ಆತಂಕ ತಪ್ಪಿಸುವ ಉದ್ದೇಶವಿತ್ತು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಲಕ್ನೋದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಕಾಲ್ತುಳಿತ ಘಟನೆಯ ಬಗ್ಗೆ ಮಾತನಾಡಿದರು. “ಮೌನಿ ಅಮವಾಸ್ಯೆಯ (ಜ.29) ದಿನ ನಡೆದ ಕಾಲ್ತುಳಿತದ ಬಳಿಕ, ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರವು ತ್ವರಿತವಾಗಿ ಕಾರ್ಯನಿರ್ವಹಿಸಿದೆ. ಆ ಸಂದರ್ಭದಲ್ಲಿ 8 ಕೋಟಿ ಭಕ್ತರು ಮತ್ತು ಸಾಧುಗಳು ಕುಂಭಮೇಳದಲ್ಲಿ ಭಾಗಿಯಾಗಿದ್ದರು. ಘಟನೆಯಿಂದ ಹಲವಾರು ಭಕ್ತರು ಭಯಭೀತರಾಗಿದ್ದರು. ಎಲ್ಲರೂ ಆತಂಕಗೊಂಡರೆ, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇತ್ತು. ಹೀಗಾಗಿ, ಘಟನೆ ಬಗ್ಗೆ ಹೆಚ್ಚು ಚರ್ಚೆ ಮಾಡಲಿಲ್ಲ ಮತ್ತು ವಾಸ್ತವವನ್ನು ತಿಳಿಸಿರಲಿಲ್ಲ” ಎಂದು ಹೇಳಿದ್ದಾರೆ.

“ಅಧಿಕಾರಿಗಳು ಜನಸಂದಣಿಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಾರೆ. ಕೋಟ್ಯಂತರ ಭಕ್ತರು ಭಾಗವಹಿಸುವ ಕಠಿಣ ಸಂದರ್ಭಗಳಲ್ಲಿ ಹಲವರು ಭಯಭೀತರಾಗುತ್ತಾರೆ. ಆ ಸಮಯದಲ್ಲಿ ತಾಳ್ಮೆಯಿಂದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 29ರಂದು ನಡೆದ ಕಾಲ್ತಳಿತ ಘಟನೆಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತವೆ. ಆದರೆ, ಕನಿಷ್ಠ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಲವರು ವಾದಿಸುತ್ತಿದ್ದಾರೆ. ಮಾತ್ರವಲ್ಲದೆ, ಮೃತದೇಹಗಳನ್ನು ನದಿಗೆ ಎಸೆಯಲಾಗಿದೆ ಎಂಬ ಆರೋಪಗಳೂ ಇವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...