ಶಿಂದೆ ‘ದ್ರೋಹಿ’ ಎಂದ ಕುನಾಲ್ ಕಮ್ರಾ: ಎಫ್‌ಐಆರ್ ದಾಖಲು, ಹೋಟೆಲ್ ಧ್ವಂಸ

Date:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಟೀಕಿಸಿದ್ದು, ಈ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕುನಾಲ್ ವಿರುದ್ಧ ಶಿಂದೆ ನೇತೃತ್ವದ ಶಿವಸೇನೆ ಶಾಸಕ ಮುರ್ಜಿ ಪಟೇಲ್ ದೂರು ನೀಡಿದ್ದಾರೆ.

ಹಾಸ್ಯವಾಗಿಯೇ ಪ್ರಸಕ್ತ ವಿಷಯಗಳನ್ನು ಜನರಿಗೆ ತಿಳಿಸುವುದರಲ್ಲೇ ಹೆಸರುವಾಸಿಯಾದ ಕಮ್ರಾ ತಮ್ಮ ಕಾರ್ಯಕ್ರಮವೊಂದರಲ್ಲಿ ಶಿಂದೆ ಅವರನ್ನು ಟೀಕಿಸಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಶಿಂದೆ ಅವರನ್ನು ‘ದ್ರೋಹಿ’ ಎಂದು ಕರೆದಿದ್ದಾರೆ. ಶಿಂದೆ ಹೆಸರನ್ನು ಎಲ್ಲಿಯೂ ಉಲ್ಲೇಖಿಸದಿದ್ದರೂ ಹಾಡಿನ ಮೂಲಕ ತನ್ನ ಪಕ್ಷವನ್ನೇ ಇಬ್ಭಾಗ ಮಾಡಿದ ದ್ರೋಹಿ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕುನಾಲ್ ಕಮ್ರಾ ಜೊತೆ ಟ್ವೀಟ್‌ ವಾರ್ | ಓಲಾ ಷೇರು ಕುಸಿತ; ಭವಿಶ್ ದುರಹಂಕಾರದ ಫಲವೆಂದ ನೆಟ್ಟಿಗರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಂದೆ ಬೆಂಬಲಿಗರು ಕಮ್ರಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮ್ರಾ ಕಾರ್ಯಕ್ರಮ ನಡೆದ ಮುಂಬೈನ ಖಾರ್ ಪ್ರದೇಶದ ಹೋಟೆಲ್ ಅನ್ನು ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ.

hotel 2

ಇತ್ತೀಚೆಗೆ ಶಿವಸೇನೆಗೆ ಸೇರಿದ ಸಂಜಯ್ ನಿರುಪಮ್ ಕಮ್ರಾಗೆ ಬೆದರಿಕೆ ಹಾಕಿದ್ದಾರೆ. “ನಾವು ನಾಳೆ ಬೆಳಿಗ್ಗೆ 11 ಗಂಟೆಗೆ ಕುನಾಲ್ ಕಮ್ರಾಗೆ ಪಾಠ ಕಲಿಸುತ್ತೇವೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಮ್ರಾ ‘ನಯ ಭಾರತ್’ (ಹೊಸ ಭಾರತ) ಎಂಬ ಕಾರ್ಯಕ್ರಮದಲ್ಲಿ ಸಮಕಾಲೀನ ರಾಜಕೀಯದ ಬಗ್ಗೆ ಹಾಸ್ಯವಾಗಿ ಚರ್ಚಿಸಿದ್ದರು. ಮೊದಲು ಬಿಜೆಪಿಯಿಂದ ಶಿವಸೇನೆ ಹೊರಬಂತು, ಬಳಿಕ ಶಿವಸೇನೆಯಿಂದ ಶಿವಸೇನೆಯೇ ಹೊರಬಂದಿದೆ ಎಂದು ಗೇಲಿ ಮಾಡಿದ್ದಾರೆ. ಥಾಣೆಯ ನಾಯಕ ಎನ್ನುವ ಮೂಲಕ ಪರೋಕ್ಷವಾಗಿ ಶಿಂದೆ ಅವರನ್ನು ಸಂಬೋಧಿಸಿದ ಹಾಡೊಂದರಲ್ಲಿ ಶಿಂದೆ ತನ್ನವರಿಗೆ ದ್ರೋಹ ಬಗೆದವರು (ದ್ರೋಹಿ) ಎಂದಿದ್ದಾರೆ.

ಇದನ್ನು ಓದಿದ್ದೀರಾ? ಕೆಟ್ಟು ನಿಲ್ಲುತ್ತಿವೆ ‘ಓಲಾ ಇವಿ’; ಓಲಾ ಸಿಇಒ ಅಗರ್ವಾಲ್ ಮತ್ತು ಕುನಾಲ್ ಕಮ್ರಾ ನಡುವೆ ಟ್ವೀಟ್ ವಾರ್

ಶಿವಸೇನೆ ನಾಯಕರು ಹೋಟೆಲ್ ಧ್ವಂಸ ಮಾಡಿ, ತನ್ನ ವಿರುದ್ಧ ದೂರು ದಾಖಲಿಸಿದ ಬೆನ್ನಲ್ಲೇ ಕಮ್ರಾ ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್ ಮಾಡಿದ್ದಾರೆ. ಕೆಂಪು ಬಣ್ಣದ ಸಣ್ಣ ಸಂವಿಧಾನದ ಪ್ರತಿಯನ್ನು ಹಿಡಿದ ಚಿತ್ರದೊಂದಿಗೆ “ಮುಂದಿನ ದಾರಿ” ಎಂದು ಬರೆದುಕೊಂಡಿದ್ದಾರೆ.

ಈ ಸಂವಿಧಾನ ಪ್ರತಿಯು ಇತ್ತೀಚೆಗೆ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ. ಕೆಲವು ತಿಂಗಳುಗಳ ಹಿಂದೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇದೇ ರೀತಿಯ ಸಂವಿಧಾನದ ಪ್ರತಿಯನ್ನು ಕೊಂಡೊಯ್ದು “ಸಂವಿಧಾನವನ್ನು ಉಳಿಸಿ” ಎಂದು ಜನರಿಗೆ ಕರೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...