ಬಿಜೆಪಿ ನಾಯಕರ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥ: ಸಿದ್ದರಾಮಯ್ಯ

Date:

ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇವತ್ತಿನವರೆಗೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ” ಎಂದರು.

“ಬಿಜೆಪಿಯೊಳಗೆ ಸಮನ್ವಯ ಸಾಧ್ಯವೇ ಇಲ್ಲ. ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ” ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ”ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಪ್ಪಿತಸ್ಥರ ವಿರುದ್ಧ ಕ್ರಮ

“ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ ಮಾತನಾಡಿ ಯಾರು ತಪ್ಪಿತಸ್ಥರೋ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

ಪಂಚಾಮಸಾಲಿ: ಸ್ವಾಮೀಜಿಯವರೊಂದಿಗೆ ಮಾತನಾಡುತ್ತೇನೆ

“ಪಂಚಾಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು 13 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡಲಾಗುವುದು. ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿಯವರೊಂದಿಗೆ ಮಾತನಾಡುತ್ತೇನೆ” ಎಂದು ತಿಳಿಸಿದರು.

ಸಭಾಧ್ಯಕ್ಷರ ನಿರ್ಧಾರಕ್ಕೆ ಬಿಟ್ಟಿದ್ದು

ಸುವರ್ಣ ಸೌಧದಲ್ಲಿರುವ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ”ಅದು ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು” ಎಂದರು.

ಬಿಜೆಪಿ ಮತ್ತು ಜೆಡಿಎಸ್ ಭ್ರಮಾಲೋಕದಲ್ಲಿದ್ದಾರೆ

ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, “ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದ್ದು, ಭ್ರಮಾಲೋಕದಲ್ಲಿದ್ದಾರೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...