ಲಡಾಕ್‌ನೊಳಗೆ ನುಸುಳಿದ್ದ ಚೀನೀ ಸೈನಿಕರನ್ನು ಹಿಮ್ಮೆಟ್ಟಿಸಿದ ಭಾರತೀಯ ಕುರಿಗಾಹಿಗಳು: ವಿಡಿಯೋ ವೈರಲ್

Date:

ದೇಶದ ಸಂಸತ್‌ನ ಬಜೆಟ್ ಅಧಿವೇಶನ ಆರಂಭದ ದಿನವೇ ಭಾರತ-ಚೀನಾ ಗಡಿಯಲ್ಲಿ ನಡೆದ ಘಟನೆಯೊಂದರ ವಿಡಿಯೋ ವೈರಲಾಗಿದೆ.

ಲಡಾಕ್‌ನೊಳಗೆ ನುಸುಳಿದ್ದ ಚೀನಾದ ಸೈನಿಕರನ್ನು ಹಿಮ್ಮೆಟ್ಟಿಸಿರುವ ಭಾರತೀಯ ಕುರಿಗಾಹಿಗಳು, ಬಂದ ದಾರಿಗೆ ಸುಂಕವಿಲ್ಲದಂತೆ ಹಿಂದೆ ಹೋಗಿರುವ ಬಗ್ಗೆ ವರದಿಯಾಗಿದೆ. ಈ ಬೆಳವಣಿಗೆಯು ಜನವರಿ 2ರಂದು ನಡೆದಿದ್ದು, ಭಾರತದ ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ವಾಸಿಸುತ್ತಿರುವ ಸ್ಥಳೀಯ ಕುರುಬರು ಮತ್ತು ಚೀನೀ ಸೈನಿಕರ ನಡುವೆ ನಡೆದ ವಾಗ್ವಾದದ ವೀಡಿಯೊ ಬಜೆಟ್ ಅಧಿವೇಶನ ಆರಂಭದ ದಿನವೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ಮುಂದುವರಿದಿದೆ. ಲಡಾಖ್‌ನಲ್ಲಿ ಕುರುಬರ ಗುಂಪನ್ನು ಚೀನಾ ಸೈನಿಕರು ಕುರಿಗಳನ್ನು ಮೇಯಿಸುವುದನ್ನು ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ತಡೆದಿದ್ದಾರೆ. ಆದರೆ ಕುರುಬರು ಹಿಂದೆ ಹೋಗಲು ನಿರಾಕರಿಸಿದ್ದಲ್ಲದೇ, ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕರನ್ನು ಧೈರ್ಯದಿಂದ ಎದುರಿಸಿದ್ದಾರೆ. ಅಲ್ಲದೇ, ನಾವು ಭಾರತೀಯ ಭೂಪ್ರದೇಶದಲ್ಲಿ ನಮ್ಮ ಕುರಿಗಳನ್ನು ಮೇಯಿಸುತ್ತಿದ್ದೇವೆ. ಅದನ್ನು ಕೇಳಲು ನೀವು ಯಾರು ಎಂದು ಪ್ರಶ್ನಿಸಿದ್ದಾರೆ.

“ಇದು ಭಾರತದ ಭೂ ಪ್ರದೇಶ, ವಾಸ್ತವ ಗಡಿ ನಿಯಂತ್ರಣ ರೇಖೆ ಇನ್ನು ದೂರವಿದೆ, ನೀವು ಹಿಂದೆ ಸರಿಯಿರಿ” ಎಂದು ಖಡಕ್ ಎಚ್ಚರಿಕೆ ಕೊಟ್ಟ ನಂತರ ಅಲ್ಲಿಂದ ನಿರ್ಗಮಿಸುವ ದೃಶ್ಯವು ವಿಡಿಯೋದಲ್ಲಿ ದಾಖಲಾಗಿದೆ.

ಕುರಿ ಹಾಗೂ ಸಾಕು ಪ್ರಾಣಿಗಳನ್ನು ಮೇಯಿಸುವ ಹಕ್ಕಿಗೆ ಸಂಬಂಧಿಸಿದಂತೆ ಚೀನಾ ಸೈನಿಕರ ಜೊತೆ ವಾಗ್ವಾದದ ದೃಶ್ಯವನ್ನು ಲಡಾಖ್ ಗಡಿ ಭಾಗದ ಕುರಿಗಾಹಿಗಳು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಅದೇ ವಿಡಿಯೋ ಈಗ, ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಜೊತೆಗೆ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.

2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೈನಿಕರು-ಚೀನೀ ಸೈನಿಕರ ನಡುವೆ ನಡೆದಿದ್ದ ಘರ್ಷಣೆಯು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಒಂದಿಂಚನ್ನೂ ಕೂಡ ನಾವು ಬಿಟ್ಟುಕೊಡಲ್ಲ ಎಂದು ಹೇಳಿಕೆ ನೀಡಿದ್ದರು. ಈ ಎಲ್ಲ ಬೆಳವಣಿಗೆಯ ನಡುವೆ ಈಗಿನ ಘಟನೆ ಗಡಿಯಲ್ಲಿ ಸೈನಿಕರು ಹಾಗೂ ಸ್ಥಳೀಯತು ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದೆ.

ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಸ್ಥಳೀಯ ಅಲೆಮಾರಿ ಜನಾಂಗಕ್ಕೆ ಸೇರಿರುವ ಕುರಿಗಾಹಿಗಳು, ಗಾಲ್ವಾನ್ ಕಣಿವೆಯಲ್ಲಿ ಸಂಘರ್ಷದ ಬಳಿಕ ಪೂರ್ವ ಲಡಾಖ್ ಪ್ರಾಂತ್ಯದಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಮೇಯಿಸಲು ಸಾಧ್ಯ ಆಗುತ್ತಿರಲಿಲ್ಲ. ಇದೀಗ ಇದೇ ಮೊದಲ ಬಾರಿಗೆ ತಮ್ಮ ಸಾಕು ಪ್ರಾಣಿಗಳನ್ನು ಪೂರ್ವ ಲಡಾಖ್‌ಗೆ ಕರೆದೊಯ್ದ ವೇಳೆ ಕುರಿಗಾಹಿಗಳನ್ನು ಚೀನಾ ಸೈನಿಕರು ತಡೆದಿರುವುದಾಗಿ ವರದಿಯಾಗಿದೆ.

ಚೀನಾ ಸೈನಿಕರ ಜೊತೆಗೆ ಕುರಿಗಾಹಿಗಳು ಮಾತ್ರ ವಾಕ್ಸಮರ ನಡೆಸಿದ್ದು, ಯಾವುದೇ ಹಿಂಸಾಚಾರ ನಡೆಸಿಲ್ಲ. ಆದರೆ, ಈ ವಾಕ್ಸಮರದಲ್ಲಿ ಭಾರತದ ಕುರಿಗಾಹಿಗಳು ಮೇಲುಗೈ ಸಾಧಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಕುರಿಗಾಹಿಗಳು ಚೀನಾ ಸೈನಿಕರ ವಿರುದ್ಧ ದಿಟ್ಟತನದಿಂದ ಎದುರಿಸಿರುವುದನ್ನು ಭಾರತೀಯ ಸೇನೆಯು ಪ್ರಶಂಸಿಸಿದೆ. “ನಮ್ಮ ಈ ಧೈರ್ಯಕ್ಕೆ ಭಾರತೀಯ ಸೇನೆ ನೀಡಿರುವ ಧೈರ್ಯವೇ ನಮಗೆ ಸ್ಪೂರ್ತಿ” ಎಂದು ಚೀನೀ ಸೈನಿಕರನ್ನು ಎದುರಿಸಿದ್ದ ತಂಡದಲ್ಲಿದ್ದ ಕುರಿಗಾಹಿಯೋರ್ವರು ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...