ಕೆರೆ ತುಂಬಿಸುವ ಯೋಜನೆ | ಅಂತರ್ಜಲದ ಮೇಲಾದ ಪರಿಣಾಮ ಬಗ್ಗೆ ವಿಸ್ತೃತ ವರದಿ ನೀಡಿ: ಸಚಿವ ಭೋಸರಾಜು ಸೂಚನೆ

Date:

ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆಗಳಿಂದ ಅಂತರ್ಜಲದ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಸೋಮವಾರ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ, ಅಂತರ್ಜಲ ಇಲಾಖೆ ಹಾಗೂ ಅಟಲ್ ಭೂಜಲ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

“ರಾಜ್ಯದಲ್ಲಿ ಕಳೆದ 10 ವರ್ಷಗಳಿಗೆ ಹೋಲಿಸಿದರೆ ಕಳೆದ ಕೆಲವು ವರ್ಷಗಳಲ್ಲಿ117 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. 119 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿರುವುದು ಅಂಕಿ ಸಂಖ್ಯೆಗಳಿಂದ ತಿಳಿದುಬಂದಿದೆ. ಕೆರೆ ತುಂಬುವ ಯೋಜನೆಗಳನ್ನ ಕೈಗೊಳ್ಳಲಾಗಿರುವಂತಹ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆರೆ ತುಂಬುವ ಯೋಜನೆಗಳಿಂದ ಆಗಿರುವಂತಹ ಪರಿಣಾಮದ ಬಗ್ಗೆ ವಿಸ್ತೃತ ಅಧ್ಯಯನ ಅಗತ್ಯವಿದೆ. ಬರಗಾಲದ ತೀವ್ರತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಧೀರ್ಘಕಾಲೀನ ಯೋಜನೆಗಳನ್ನು ಕೈಗೊಳ್ಳಲು ಇದು ನೆರವಾಗಲಿದೆ. ಈ ಬಗ್ಗೆ ಅಧ್ಯಯನ ಕೈಗೊಂಡು ವರದಿ ಸಲ್ಲಿಸುವಂತೆ” ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆರೆ ಸಂಘಗಳ ನಿಶ್ಚಿತ ಠೇವಣಿ ಮಾಹಿತಿ ನೀಡದ ಅಧಿಕಾರಿಗಳ ತರಾಟೆ

“ಜಲ ಸಂವರ್ಧನೆ ಯೋಜನೆಯ ಅಡಿಯಲ್ಲಿ ರಚಿಸಲಾಗಿರುವಂತಹ ಕೆರೆ ಸಂಘಗಳ ಮೂಲಕ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿಗಳನ್ನು ಇಡಲಾಗಿದೆ. ಕಳೆದ ಹಲವಾರು ವರ್ಷಗಳಲ್ಲಿ ಕೆರೆ ಸಂಘಗಳ ಮೂಲಕ ಇರಿಸಲಾದ ಠೇವಣಿಗಳ ಸರಿಯಾದ ನಿರ್ವಹಣೆಯಾಗದೇ ಇರುವುದು ಸಚಿವರ ಗಮನಕ್ಕೆ ಬಂದಿತು. ಈ ಬಗ್ಗೆ ಅಧಿಕಾರಿಗಳಿಂದ ಸರಿಯಾದ ಮಾಹಿತಿ ದೊರೆಯದೇ ಇರುವ ಬಗ್ಗೆ ಸಚಿವರು ಕೋಪಗೊಂಡರು. ನಿಶ್ಚಿತ ಠೇವಣಿಯ ಸರಿಯಾದ ನಿರ್ವಹಣೆ ಮಾಡುವುದು ಅಯಾ ಅಧಿಕಾರಿಗಳ ಕರ್ತವ್ಯವಾಗಿದೆ. ಇದರಲ್ಲಿ ವಿಫಲರಾಗುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ” ಸಚಿವರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕೆರೆ ಸಂಜೀವಿನಿ ಯೋಜನೆಯ ಬಗ್ಗೆ ಪ್ರಚಾರ ನೀಡಿ

“ಕೆರೆ ಸಂಜೀವಿನಿ ಯೋಜನೆಯ ಅಡಿಯಲ್ಲಿ ಕೆರೆಯಿಂದ ತೆಗೆಯಲಾಗುವ ಹೂಳಿನ ಬಗ್ಗೆ ಮೊದಲೇ ರೈತರಿಗೆ ಮಾಹಿತಿ ನೀಡುವ ಕಾರ್ಯ ಮಾಡಬೇಕು. ಬೀಜ ಬಿತ್ತುವಂತಹ ಸಮಯದಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಂಡಲ್ಲಿ ಹೆಚ್ಚಿನ ರೈತರು ಹೂಳನ್ನು ತಗೆದುಕೊಂಡು ಹೋಗುತ್ತಾರೆ. ಆದರೆ, ಕಾಲೋಚಿತವಲ್ಲದ ಅನುಷ್ಠಾನಕ್ಕೆ ಸರಿಯಾದ ಪ್ರತಿಕ್ರಿಯೆ ದೊರಕುವುದಿಲ್ಲ. ಈ ಹಿನ್ನೆಲೆಯಲ್ಲಿ ಕೆರೆ ಸಂಜೀವಿನಿ ಯೋಜನೆಯ ಪ್ರಾರಂಭಕ್ಕೂ ಮುನ್ನ ರೈತರಿಗೆ ಮಾಹಿತಿ ನೀಡಬೇಕು. ಹಾಗೂ ಕೆರೆಯಲ್ಲಿ ಹೂಳನ್ನು ತಗೆಯುವ ಮೂಲಕ ಆಯಾ ಕೆರೆಗಳ ನೀರು ತುಂಬುವ ಸಾಮರ್ಥ್ಯವೂ ಹೆಚ್ಚಾಗುವಂತೆ ನೋಡಿಕೋಳ್ಳಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿಗಳಾದ ಯತೀಶ್ ಚಂದ್ರ, ಕೆರೆ ಅಭಿವೃದ್ದಿ ಪ್ರಾಧಿಕಾರದ ನಿರ್ದೇಶಕರಾದ ಶಿವಸ್ವಾಮಿ, ಅಂತರ್ಜಲ ಇಲಾಖೆಯ ನಿರ್ದೇಶಕರಾದ ರಾಮಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...