ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ ಪ್ರಕರಣ | ಸಿ ಟಿ ರವಿ ತಕ್ಷಣ ಬಿಡುಗಡೆಗೆ ಹೈಕೋರ್ಟ್‌ ಆದೇಶ

Date:

ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಧ್ಯಂತರ ಹೈಕೋರ್ಟ್‌ ಆದೇಶ ನೀಡಿದೆ. ತನಿಖಾಧಿಕಾರಿ ಸೂಚಿಸಿದಾಗ ರವಿ ತನಿಖೆಗೆ ಹಾಜರಾಗಬೇಕು ಎಂಬ ನ್ಯಾಯಾಲಯ ಷರತ್ತು ವಿಧಿಸಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಿ ಟಿ ರವಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠದಿಂದ ಶುಕ್ರವಾರ ವಿಚಾರಣೆ ನಡೆಯಿತು. ರವಿ ಅವರ ಪರವಾಗಿ ವಾದಿಸುತ್ತಿರುವ ಹಿರಿಯ ವಕೀಲ ಸಂದೇಶ್‌ ಚೌಟ ಅವರು ‘ರವಿ ಅವರನ್ನು ಬಂಧಿಸಿರುವುದೇ ಅಕ್ರಮ. ನಾನು ತಕ್ಷಣ ರವಿ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿ, ನಿಂದಿಸಿದ ಪ್ರಕರಣದಲ್ಲಿ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ವಶಕ್ಕೆ ಪಡೆದಿ‌ದ್ದರು. ಸಿ.ಟಿ. ರವಿ ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಪೊಲೀಸರು ಕರೆತರುತ್ತಿದ್ದಾರೆ. ಬೆಳಗಾವಿ 5ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ಜಡ್ಜ್ ಸ್ಪರ್ಷಾ ಡಿ.ಸೋಜ ಅವರು ಶುಕ್ರವಾರ ಪ್ರಕರಣವನ್ನು ಬೆಳಗಾವಿಯಿಂದ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ನೀಡಿದ ಬಳಿಕ ಬೆಂಗಳೂರಿಗೆ ರವಿ ಅವರನ್ನು ಕರೆತರಲಾಗುತ್ತಿದೆ.

ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್) ಕಲಂ 75ರಡಿ (ಲೈಂಗಿಕ ಕಿರುಕುಳ) ಹಾಗೂ ಬಿಎನ್‌ಎಸ್ ಕಲಂ 79ರಡಿ (ಮಹಿಳೆಯ ಮಾನಕ್ಕೆ ಕುಂದು ಉಂಟು ಮಾಡುವ ಉದ್ದೇಶವಿರುವ ಪದ ಬಳಕೆ ಸನ್ನೆ ಅಥವಾ ಕೃತ್ಯ) ಪ್ರಕರಣ ದಾಖಲಾಗಿದೆ. ಈ ಕಲಂಗಳಡಿ ದಾಖಲಾಗುವ ಪ್ರಕರಣಗಳು ಸಾಬೀತಾದರೆ ಮೂರು ವರ್ಷಗಳ ವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...