ಉದ್ಯೋಗಕ್ಕಾಗಿ ಜಮೀನು ಪ್ರಕರಣ; ಲಾಲು ಮತ್ತು ತೇಜಸ್ವಿಗೆ ಇಡಿ ಹೊಸ ಸಮನ್ಸ್

Date:

ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್‌ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಜಮೀನು ಹಗರಣದ ತನಿಖೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡಿದೆ. ಲಾಲು ರೈಲ್ವೇ ಸಚಿವರಾಗಿದ್ದಾಗ ತಮ್ಮ ಕುಟುಂಬಕ್ಕೆ ಮತ್ತು ತಮ್ಮ ಸಹಚರರಿಗೆ ಕಡಿಮೆ ದರದಲ್ಲಿ ಭೂಮಿಯನ್ನು ಉಡುಗೊರೆಯಾಗಿ ನೀಡಿದವರಿಗೆ ಅಥವಾ ಮಾರಾಟ ಮಾಡಿದವರಿಗೆ ರೈಲ್ವೆಯಲ್ಲಿ ಉದ್ಯೋಗ ನೀಡಲಾಗಿದೆ ಎಂಬ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಿತ್ತು. ಇದೀಗ, ಪ್ರಕರಣವನ್ನು ಇಡಿ ಕೈಗೆತ್ತಿಕೊಂಡಿದೆ.

“ಪಾಟ್ನಾದ ಬ್ಯಾಂಕ್ ರಸ್ತೆಯಲ್ಲಿರುವ ಇಡಿ ಕಚೇರಿಯಲ್ಲಿ ಜನವರಿ 29 ರಂದು ಲಾಲು ಅವರು ಹಾಜರಾಗಬೇಕು ಮತ್ತು ತೇಜಸ್ವಿ ಅವರು ಜನವರಿ 30ರಂದು ಹಾಜರಾಗಬೇಕು” ಎಂದು ಇಡಿ ಹೇಳಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಇದೇ ಪ್ರಕರಣದಲ್ಲಿ ಇಬ್ಬರನ್ನೂ ದೆಹಲಿಯಲ್ಲಿರುವ ಇಡಿ ಕಚೇರಿಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಆದರೆ, ಇಬ್ಬರೂ ಹಾಜರಾಗಿರಲಿಲ್ಲ. ಕಳೆದ ವರ್ಷ ಒಮ್ಮೆ ಏಜೆನ್ಸಿಯ ಮುಂದೆ ಹಾಜರಾಗಿದ್ದರು.

2023ರ ನವೆಂಬರ್‌ನಲ್ಲಿ ಲಾಲು ಅವರ ಆಪ್ತ ಅಮಿತ್ ಕತ್ಯಾಲ್‌ ಅವರನ್ನು ಇಡಿ ಬಂಧಿಸಿ, ವಿಚಾರಣೆಗೆ ಒಳಪಡಿಸಿದೆ. ಈ ಬೆನ್ನಲ್ಲೇ, ಇದೀಗ, ತಂದೆ-ಮಗನನ್ನು ವಿಚಾರಣೆಗೆ ಹಾಜರಾಗುವಂತೆ ಕರೆದಿದೆ.

ಇಡಿ ಅಧಿಕಾರಿಗಳ ಪ್ರಕಾರ, ರೈಲ್ವೇ ಉದ್ಯೋಗ ಪಡೆದ ಅಭ್ಯರ್ಥಿಗಳಿಂದ ಲಾಲು ಅವರ ಪತ್ನಿ ರಾಬ್ರಿ ದೇವಿ ಮತ್ತು ಮಗಳು ಹೇಮಾ ಯಾದವ್ ಪ್ರತ್ಯೇಕವಾಗಿ ತಲಾ ಎರಡು ಕಡೆಗಳಲ್ಲಿ ಭೂಮಿಯನ್ನು ಪಡೆದಿದ್ದಾರೆ. ಈ ಭೂಮಿಯನ್ನು ಕೇವಲ 7.5 ಲಕ್ಷ ರೂಪಾಯಿಗೆ ಖರೀದಿಸಲಾಗಿದೆ. ನಂತರ, ಅಬು ಡೋಜಾನಾ ನಡೆಸುತ್ತಿರುವ ಮೆರಿಡಿಯನ್ ಕನ್ಸ್ಟ್ರಕ್ಷನ್ಸ್ ಇಂಡಿಯಾ ಲಿಮಿಟೆಡ್ ಕಂಪನಿಗೆ 3.5 ಕೋಟಿಗೆ ಮಾರಾಟ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...