ಭೂ ಹಗರಣ | ವಿಪಕ್ಷ ನಾಯಕ ಅಶೋಕ್ ವಿರುದ್ಧ ನ್ಯಾಯಾಂಗ ತನಿಖೆ; ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ

Date:

ಬಗರ್ ಹುಕುಂ ಯೋಜನೆ ಅಡಿ ಕೆಂಗೇರಿಯ ಬಿಎಂ ಕಾವಲ್‌ನಲ್ಲಿ 2,500 ಎಕರೆ ‘ಗೋಮಾಳ’ ಜಮೀನನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡುವಾಗ ಅವ್ಯವಹಾರ ನಡೆದಿದೆ. ಆರ್ ಅಶೋಕ್ ಕಂದಾಯ ಸಚಿವರಾಗಿದ್ದಾಗ ಈ ಅವ್ಯವಹಾರ ನಡೆದಿದೆ. ಅವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ, ಮಾಜಿ ಎಂಎಲ್‌ಸಿ ರಮೇಶ್ ಬಾಬು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ರಮೇಶ್ ಬಾಬು, “ವಿಪಕ್ಷ ನಾಯಕರಾಗಿ ಕೆಲಸ ಮಾಡುವವರು ಆರೋಪಗಳಿಂದ ಮುಕ್ತರಾಗಿರಬೇಕು. ಆದರೆ ಅವರು (ಅಶೋಕ) ಸಚಿವರಾಗಿದ್ದಾಗ ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಆಗ, 2,500 ಎಕರೆ ಜಮೀನು ಹಂಚಿಕೆಯಲ್ಲಿ ಹಲವು ಅವ್ಯವಹಾರ ನಡೆದಿದೆ. ಅವರ ವಿರುದ್ಧ ಬಿಎಂಟಿಎಫ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿ ಅಶೋಕ್ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅದನ್ನು ತಿರಸ್ಕರಿಸಿ, ಪ್ರಕರಣದ ತನಿಖೆಗೆ ಸೂಚಿಸಿದೆ. ಕಾಂಗ್ರೆಸ್ ಸರ್ಕಾರ ಬಗರ್ ಹುಕುಂ ಭೂ ಮಂಜೂರಾತಿ ಹಗರಣದ ಸಮಗ್ರ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿ.ಎಂ.ಕಾವಲ್ ಭೂ ಮಂಜೂರಾತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಬಾರದು ಎಂದು ಅಶೋಕ್ ತಡೆಯಾಜ್ಞೆ ತಂದಿದ್ದಾರೆ. ತಡೆಯಜ್ಞೆ ಅಡಿಯಲ್ಲಿ ರಕ್ಷಣೆ ಪಡೆದಿರುವ ಅವರಿಗೆ ಸರ್ಕಾರವನ್ನು ಟೀಕೆ ಮಾಡುವ ನೈತಿಕ ಹಕ್ಕಿಲ್ಲ” ಎಂದು ರಮೇಶ್ ಬಾಬು ಹೇಳಿದ್ದಾರೆ.

“ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ರಾಷ್ಟ್ರೀಯ ನಗರ ನವೀಕರಣ ಮಿಷನ್ ಅಡಿಯಲ್ಲಿ 143 ಮಾರ್ಕೊಪೋಲೊ ಬಸ್‌ಗಳ ಖರೀದಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆಯೂ ಸರ್ಕಾರ ತನಿಖೆಗೆ ಆದೇಶಿಸಬೇಕು. ಅಶೋಕ್ ಅವರು ತಮ್ಮ ವಿರುದ್ಧದ ಈ ಆರೋಪ ಸಂಬಂಧ ಈವರೆಗೆ ಪ್ರತಿಕ್ರಿಯಿಸಿಲ್ಲ. ಜಮೀನು ಡಿನೋಟಿಫಿಕೇಷನ್‌ಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಅವರು ಸಿಲುಕಿಕೊಂಡಿದ್ದರು. ಆಗ, ಕಾಂಗ್ರೆಸ್‌ ಪ್ರತಿಭಟನೆಯಿಂದಾಗಿ ಭೂಮಿಯನ್ನು ಡಿನೋಟಿಫಿಕೇಷನ್‌ ಮಾಡದೆ, ಉಳಿಸಲಾಯಿತು” ಎಂದು ರಮೇಶ್ ಬಾಬು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...